ಶಿಗ್ಗಾಂವಿ ಬಂಡಾಯ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ, ನಿಟ್ಟುಸಿರುಬಿಟ್ಟ ಕಾಂಗ್ರೆಸ್​

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಕಾಂಗ್ರೆಸ್​ನಲ್ಲಿ​ ಬಂಡಾಯದ ಬಿಸಿ ಶಮನವಾಗಿದೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಮಾಜಿ ಶಾಸಕರ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ ಕಾಂಗ್ರೆಸ್​ ನಾಯಕರು ನಿರಾಳರಾಗಿದ್ದಾರೆ.

ಶಿಗ್ಗಾಂವಿ ಬಂಡಾಯ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ, ನಿಟ್ಟುಸಿರುಬಿಟ್ಟ ಕಾಂಗ್ರೆಸ್​
ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 28, 2024 | 8:29 PM

ಹಾವೇರಿ, (ಅಕ್ಟೋಬರ್ 28): ಶಿಗ್ಗಾಂವಿಯಲ್ಲಿ ಕಾಂಗ್ರೆಸ್​​ ನಾಯಕರನ್ನು ಆತಂಕಕ್ಕೀಡು ಮಾಡಿದ್ದ ಬಂಡಾಯ ಶಮನವಾಗಿದೆ. ಯಾಕಂದ್ರೆ, ಟಿಕೆಟ್​ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ಮಂಜುನಾಥ ಕುನ್ನೂರು ನಾಮಪತ್ರ ತಿರಸ್ಕೃತಗೊಂಡಿದೆ. ಅಪಡವಿಟ್ ಗೆ ಅಗತ್ಯ ಹಾಗೂ ಸಮರ್ಪಕ ವಿವರ ನೀಡದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಮಂಜುನಾಥ ಕುನ್ನೂರು ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕೃತ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಸಹ ಈ ಬಾರಿ ಶಿಗ್ಗಾಂವಿ ಉಪಚುನಾವಣೆ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದ್ರೆ, ಕಾಂಗ್ರೆಸ್ ಹೈಕಮಾಂಡ್ ಪಠಾಣ್ ಅವರಿಗೆ ಮಣೆಹಾಕಿದೆ. ಇದಿರಂದ ಅಸಮಾಧಾನಗೊಂಡಿದ್ದ ಖಾದ್ರೆ, ನವೆಂಬರ್ 13ರಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಮೂಲಕ ಕಾಂಗ್ರೆಸ್​ಗೆ ಸೆಡ್ಡು  ಹೊಡೆದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯನ್ನು ಬೆಂಗಳೂರಲ್ಲೇ ಲಾಕ್​ ಮಾಡಿದ ಸಚಿವ ಜಮೀರ್

ಮತ್ತೊಂದೆಡೆ ತಮ್ಮ ಪುತ್ರನಿಗೆ ಟಿಕೆಟ್​ ನೀಡುವಂತೆ ಮಂಜುನಾಥ ಕುನ್ನೂರು ಸಹ ಮನವಿ ಮಾಡಿದ್ದರು. ಆದ್ರೆ, ಟಿಕೆಟ್ ಸಿಗದಿದ್ದಕ್ಕೆ ಮಂಜುನಾಥ ಕುನ್ನೂರು ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವರ ನಾಮಪತ್ರ ರಿಜೆಕ್ಟ್​ ಆಗಿದೆ. ಇನ್ನು ಖಾದ್ರಿ ಸಂಧಾನ ಯಶಸ್ವಿಯಾಗಿದ್ದು, ಅವರು ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್​ ನಾಯಕರು ಬಿರಾಳರಾಗಿದ್ದಾರೆ.

ಒಂದು ವೇಳೆ ಖಾದ್ರಿ ಸಂಧಾನಕ್ಕೆ ಒಪ್ಪಿರಲಿಲ್ಲ ಅಂದರೆ ಅಲ್ಪಸಂಖ್ಯಾತ ಮತಗಳ ವಿಭಜನೆಯಾಗುತ್ತಿದ್ದವು. ಇನ್ನು ಮಂಜುನಾಥ್ ಸಹ ಕಾಂಗ್ರೆಸ್​ನ ಅಲ್ಪ ಸ್ವಲ್ಪ ಮತಗಳನ್ನು ಪಡೆದುಕೊಂಡು ಮಗ್ಗಲು ಮುಳ್ಳಾಗುತ್ತಿದ್ದರು. ಆದರೆ, ಇದೀಗ  ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ಗೆ ಅಡ್ಡಿ ಆತಂಖಗಳು ನಿವಾರಣೆಯಾದಂತಾಗಿದೆ.

ಮತ್ತೊಂದೆಡೆ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ್‌ ವಿವಿಧೆಡೆ ಪಾದಯಾತ್ರೆ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಇದರೊಟ್ಟಿಗೆ ಬೆಂಬಲಿಗರ ಒತ್ತಡಕ್ಕೆ ಮಣಿದು ಖಾದ್ರಿ ಕಣದಲ್ಲಿ ಉಳಿಯುವ ಭೀತಿಯೂ ಅವರನ್ನು ಕಾಡುತ್ತಿದೆ. ವರಿಷ್ಠರ ಅಂಗಳದಲ್ಲಿರುವ ಖಾದ್ರಿ ಅ .29 ಅಥವಾ 30 ರಂದು ಕ್ಷೇತ್ರಕ್ಕೆ ಬಂದು ನಾಮಪತ್ರ ವಾಪಸ್‌ ಪಡೆಯಲಿದ್ದಾರೆ. ಆದ್ರೆ, ಅವರ ಬೆಂಬಲಿಗರು ಯಾವ ಹೆಜ್ಜೆ ಹಾಕುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Mon, 28 October 24

ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ