AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಅನ್ಯಕೋಮಿನ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ, ಆರೋಪ

ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ 22 ವರ್ಷದ ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಅವರ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್​ ಆಗ್ರಹಿಸಿದ್ದಾರೆ.

ಹಾವೇರಿ: ಅನ್ಯಕೋಮಿನ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ, ಆರೋಪ
ಶಿಗ್ಗಾಂವಿ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on:Apr 19, 2025 | 7:58 PM

Share

ಹಾವೇರಿ, ಏಪ್ರಿಲ್​ 19: ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ (Dalit) ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಶಿಗ್ಗಾಂವಿ (Shiggaon) ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ (22) ಮೃತ ಯುವತಿ. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್​ ಕಿರುಕುಳ ನೀಡಿದ ಆರೋಪಿ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮೃತ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು. ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್​ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್​ ನದಾಫ್​ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಿಲ್ಪಾ ಮತ್ತು ನವೀನ್​ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬಿಸಿಎ ವಿದ್ಯಾಭ್ಯಾಸದ ನಿಮಿತ್ತ ಶಿಲ್ಪಾ ಬೆಳಗಾವಿಯ ಹಾಸ್ಟೆಲ್ ಒಂದರಲ್ಲಿ ವಾಸವಿದ್ದರು. ನವೀನ್​ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ನವೀನ್ ವಿರುದ್ಧ ಕಳ್ಳತನದ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ
Image
ಗ್ಯಾಂಗ್ ರೇಪ್ ಆಗಿದೆ ಎಂದು ಪೊಲೀಸರನ್ನೇ ಬೇಸ್ತು ಬೀಳಿಸಿದ ಮಹಿಳೆ!
Image
ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾಲು ಒಕ್ಕೂಟ: ಲೀಟರ್​ ಹಾಲಿನ ದರ ಏರಿಕೆ
Image
ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ
Image
ಮ್ಯಾನ್ಮಾರ್‌, ಬ್ಯಾಂಕಾಕ್​ ಭೂಕಂಪ: ಕನ್ನಡಿಗರ ಪರಿಸ್ಥಿತಿ ಹೇಗಿದೆ?

ಈ ಹಿನ್ನೆಲೆಯಲ್ಲಿ ನವೀನ್ ಮೇಲೆ ಸಿಟ್ಟಾಗಿದ್ದ ಅಂಗಡಿ ಮಾಲೀಕ ರಂಜಾನ್ ನದಾಫ್, ಆತನ ಮೊಬೈಲ್ ಕಸಿದುಕೊಂಡಿದ್ದನು. ನಂತರ, ಆರೋಪಿ ರಂಜಾನ್​ ನದಾಫ್​, ನವೀನ್ ಮತ್ತು ಶಿಲ್ಪಾರ ಚಾಟ್​ ಮೆಸೆಜ್​ಗಳನ್ನು ನೋಡಿದ್ದಾನೆ. ಬಳಿಕ, ನವೀನ್ ಮೊಬೈಲ್​ನಲ್ಲಿದ್ದ ಶಿಲ್ಪಾ ನಂಬರ್ ಅನ್ನು ರಂಜಾನ್​ ನದಾಫ್​ ತೆಗೆದುಕೊಂಡಿದ್ದಾನೆ.

ಬಳಿಕ, ಶಿಲ್ಪಾಗೆ ಕರೆ ಮಾಡಿ ನವೀನ್ ನಿನಗೆ ದುಡ್ಡು ಕಳುಹಿಸಿದ್ದಾನೆ, ಆ ದುಡ್ಡು ಎಲ್ಲಿಂದ ಬಂತು? ನಮ್ಮ ಫರ್ನಿಚರ್ ಅಂಗಡಿಯಲ್ಲಿ ಕಳ್ಳತನ ಮಾಡಿ ನವೀನ್ ನಿನಗೆ ಹಣ‌ ಕಳುಹಿಸಿದ್ದಾನೆ. ಇದನ್ನು ಬಹಿರಂಗ ಮಾಡುತ್ತೇನೆ, ನಿಮ್ಮ ತಂದೆ-ತಾಯಿಗೆ ಹೇಳುತ್ತೇನೆ ಎಂದು ರಂಜಾನ್ ನದಾಫ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಮೃತ ಶಿಲ್ಪಾ ಪ್ರಿಯಕರ ನವೀನ್ ಹೇಳಿದ್ದಾರೆ. ಬೆಳಗಾವಿಯ ಮಾರ್ಕೆಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ರಂಜಾನ್​ ನದಾಫ್ ಬಂಧಿಸಲು ಮುತಾಲಿಕ್​ ಆಗ್ರಹ

ಆರೋಪಿ ರಂಜಾನ್ ನದಾಫ್​ನನ್ನು ಬಂಧಿಸಲು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಶಿಲ್ಪಾ ಮತ್ತು ನವೀನ್ ಪ್ರೀತಿಸುತ್ತಿದ್ದರು. ನವೀನ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ನವೀನ್ ಮನೆಯಲ್ಲಿ ಬಹಳ ಬಡತನ ಇತ್ತು. ಅವರ ತಾಯಿಗೆ ಔಷಧಿ ಕೊಡಿಸಬೇಕಿತ್ತು. ನವೀನ್​ಗೆ ರಂಜಾನ್ ನದಾಫ್​ ಸಂಬಳ ಕೊಟ್ಟಿಲ್ಲ. ಹೀಗಾಗಿ, ಅಂಗಡಿಯಲ್ಲಿ ಸ್ವಲ್ಪ ವಸ್ತು ಕಳ್ಳತನ ಮಾಡಿ ತಾಯಿಗೆ ಔಷಧಿ ಕೊಡಿಸಿದ್ದಾನೆ. ಅದಕ್ಕಾಗಿಯೇ ನವೀನ್​ಗೆ ಹೊಡೆದು ಬಡೆದು ರಂಜಾನ್ ಪೊಲೀಸರಿಗೆ ದೂರು ನೀಡಿದ್ದಾರೆ. ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿನ ಶಿಲ್ಪಾ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ ನೀಡಿದ್ದಾನೆ. ಇದರಿಂದ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಂಜಾನ್ ನದಾಫ್​ನನ್ನು ಒದ್ದು ಒಳಗೆ ಹಾಕಿ ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Sat, 19 April 25

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?