2 ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಹಾವೇರಿ, (ಡಿಸೆಂಬರ್ 25): ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ನಡೆದಿದೆ. ಚಂದ್ರಮ್ಮ(59), ಮೀನಾ(38), ಮಹೇಶ್ಕುಮಾರ್, ಧನ್ವೀರ್ ಮೃತರು.
ಇಂದು (ಡಿಸೆಂಬರ್ 25) ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. KA 05, NC 4963 ನಂಬರಿನ ಟಾಟಾ ಅಲ್ಟ್ರೋಸ್ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಡಿವೈಡರ್ಗೆ ಗುದ್ದಿ ಕಾರಿನ ಮೇಲೆ ಕಂಟೇನರ್ ಬೀಳುತ್ತಿರುವ ಭಯಾನಕ ದೃಶ್ಯ ಇಲ್ಲಿದೆ
ಚಂದ್ರಮ್ಮ ವಯಸ್ಸು 59 ವರ್ಷ, ಚಾಮರಾಜಪೇಟೆ, ಬೆಂಗಳೂರು, ಮೀನಾ ವಯಸ್ಸು 38 ವರ್ಷ, (ಚಂದ್ರಮ್ಮನ ಮಗಳು) ಹರಿಹರ, ಮಹೇಶ್ ಕುಮಾರ್ ಸಿ ,(ಚಾಲಕ ಕಮ್ ಮಾಲೀಕ) ವಯಸ್ಸು 41 ಸಾ-ಹರಿಹರ ದಾವಣಗೆರೆ ಜಿಲ್ಲೆ. ಧನವೀರ ,ವಯಸ್ಸು 11 ವರ್ಷ,-ಹರಿಹರ ಎಂದು ತಿಳಿದುಬಂದಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ