ಹಾವೇರಿ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ರಾತ್ರೋರಾತ್ರಿ ಪ್ರತಿಷ್ಠಾಪನೆ ಆಗಿದ್ದ ಬಸವಣ್ಣನ ಮೂರ್ತಿ ತೆರವು

TV9 Digital Desk

| Edited By: preethi shettigar

Updated on:Sep 21, 2021 | 8:50 AM

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನಂತರ ಮೂರ್ತಿ ತೆರವು ಕಾರ್ಯ ನಡೆದಿದೆ. ಸರಕಾರದ ಅನುಮತಿ ಪಡೆದು ಗೌರವಯುತವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡೋಣ ಎಂದು ತಿಳಿ ಹೇಳಿ ಅಧಿಕಾರಿಗಳು ಮೂರ್ತಿ ತೆರವು ಮಾಡಿಸಿದ್ದಾರೆ.

ಹಾವೇರಿ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ರಾತ್ರೋರಾತ್ರಿ ಪ್ರತಿಷ್ಠಾಪನೆ ಆಗಿದ್ದ ಬಸವಣ್ಣನ ಮೂರ್ತಿ ತೆರವು
ಬಸವಣ್ಣನ ಮೂರ್ತಿ ತೆರವು
Follow us

ಹಾವೇರಿ: ರಾತ್ರೋರಾತ್ರಿ ಪ್ರತಿಷ್ಠಾಪನೆ ಆಗಿದ್ದ ಬಸವಣ್ಣನ ಮೂರ್ತಿಯನ್ನು ತೆರವುಗೊಳಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಬಸವಣ್ಣನ ಮೂರ್ತಿಯನ್ನು ಅಧಿಕಾರಿಗಳು ತೆರವು ಮಾಡಿಸಿದ್ದಾರೆ. ರಾಜಕೀಯ ನಾಯಕರ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮದಲ್ಲಿ ಯೋಜನೆ ರೂಪಿಸಿದ್ದಾರೆ ಎಂದುಕೊಂಡು ಗ್ರಾಮದ ಕೆಲವರು ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನಂತರ ಮೂರ್ತಿ ತೆರವು ಕಾರ್ಯ ನಡೆದಿದೆ. ಸರಕಾರದ ಅನುಮತಿ ಪಡೆದು ಗೌರವಯುತವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡೋಣ ಎಂದು ತಿಳಿ ಹೇಳಿ ಅಧಿಕಾರಿಗಳು ಮೂರ್ತಿ ತೆರವು ಮಾಡಿಸಿದ್ದಾರೆ. ಮೊನ್ನೆ ರಾತ್ರಿ ಪ್ರತಿಷ್ಠಾಪನೆ ಆಗಿದ್ದ ಮೂರ್ತಿಯನ್ನು, ನಿನ್ನೆ ರಾತ್ರಿ ತೆರವು ಮಾಡಿಸಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮೈಸೂರು: ಮಹಾದೇವಮ್ಮ ದೇವಾಲಯ ತೆರವು; ದೇಗುಲ ಪುನರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಪತ್ರ ನಂಜನಗೂಡು ತಾಲೂಕಿನ ಮಹಾದೇವಮ್ಮ ದೇವಾಲಯ ತೆರವು ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಂಜನಗೂಡು ಶಾಸಕ ಹರ್ಷವರ್ಧನ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಆ ಮೂಲಕ ದೇಗುಲ ಪುನರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ನ್ಯಾಯಾಲಯದ ಆದೇಶದನ್ವಯ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ದೇವಾಲಯ ನೆಲಸಮಗೊಳಿಸಿದೆ. ಇದರಿಂದಾಗಿ ಇಲ್ಲಿನ ಗ್ರಾಮಸ್ಥರ ನಂಬಿಕೆ ಭಾವನೆಗಳಿಗೆ ಧಕ್ಕೆಯಾಗಿದೆ. ಅಲ್ಲದೇ ಧಾರ್ಮಿಕ ಆಚರಣೆಗೆ ಅಡಚಣೆ ಉಂಟಾಗಿದೆ. ಇದೀಗ ಅದೇ ಗ್ರಾಮಸ್ಥರು ನೀಡಿರುವ ಜಾಗದಲ್ಲಿ ದೇವಾಲಯ ಪುನರ್ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ 20 ಲಕ್ಷ ರೂ. ಅನುದಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Big News: ಸಾರ್ವಜನಿಕ ದೇಗುಲ ತೆರವು ತಡೆಯಲು ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ

ತಾಜಾ ಸುದ್ದಿ

Related Stories

Click on your DTH Provider to Add TV9 Kannada