ಡಬ್ಬಲ್ ಮರ್ಡರ್ ಮಾಡಿ ಜೈಲುಪಾಲಾಗಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣು
ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾಗೃಹದಲ್ಲಿ ನಡೆದ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪ್ರಯಾಣಿಕರ ಸೋಗಿನಲ್ಲಿ ಚಿನ್ನದ ಒಡವೆ ಕಳವು ಮಾಡುತ್ತಿದ್ದ ಕಳ್ಳಿಯನ್ನು ಬಂಧಿಸಲಾಗಿದೆ.

ಹಾವೇರಿ, ಮಾರ್ಚ್ 02: ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವಂತಹ (death) ಘಟನೆ ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾ ಗೃಹದಲ್ಲಿ ನಡೆದಿದೆ. ಕೋಟೆಪ್ಪ ಅಂಬಿಗೇರ್ (42) ನೇಣಿಗೆ ಶರಣಾದ ಖೈದಿ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತ ಕೋಟೆಪ್ಪ ಅಂಬಿಗೇರ್ ಸುಮಾರು ಆರುವರೆ ವರ್ಷಗಳ ಹಿಂದೆ ಡಬ್ಬಲ್ ಮರ್ಡರ್ ಮಾಡಿ ಜೈಲು ಪಾಲಾಗಿದ್ದರು. ಹೃದಯ ಸಂಬಂಧಿ ಕಾಯಿಲೆ ಇತ್ತು. ನ್ಯಾಯಾಲಯದಿಂದ ಬೆಲ್ ಸಿಕ್ಕಿರಲಿಲ್ಲ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗೌಡಳ್ಳಿ ಗ್ರಾಮದಲ್ಲಿ ನಡೆದಿದೆ. ಅರುಣ್(28) ಮೃತ ವ್ಯಕ್ತಿ. ಅರುಣ್ ಸಾವಿಗೆ ಮೈಕ್ರೋ ಫೈನಾನ್ಸ್ ಕಂಪನಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಆಪ್ತನ ಕೊಲೆಗೆ ಬಿಬಿಎಂಪಿ ಎಲೆಕ್ಷನ್ ಕಾರಣವಾಯ್ತಾ? ಹತ್ಯೆ ಹಿಂದಿನ ಸಿಕ್ರೇಟ್
ಮುತ್ತೂಟ್ ಫೈನಾನ್ಸ್ನಲ್ಲಿ 3 ಲಕ್ಷ ರೂ. ಸಾಲ ಮಾಡಿದ್ದ ಅರುಣ್, ಸಾಲ ಮರುಪಾವತಿ ಮಾಡುವಂತೆ ಮೊನ್ನೆ ರಾತ್ರಿ ನಿಂದನೆ ಆರೋಪ ಮಾಡಲಾಗಿದೆ. ಇದರಿಂದ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅರುಣ್, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಪ್ರಯಾಣಿಕರ ಸೋಗಿನಲ್ಲಿ ಪಿಕ್ ಪಾಕೆಟ್: ಐನಾತಿ ಕಳ್ಳಿಯ ಬಂಧನ
ಪ್ರಯಾಣಿಕರ ಸೋಗಿನಲ್ಲಿ ಬಸ್ನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಐನಾತಿ ಕಳ್ಳಿಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲುವೇಲಮ್ಮ ಬಂಧಿತ ಕಳ್ಳಿ. ಬಂಧಿತ ಆರೋಪಿಯಿಂದ ಸುಮಾರು 10,5 ಲಕ್ಷ ರೂ ಬೆಲೆ ಬಾಳುವ 134 ಗ್ರಾಂ ಚಿನ್ನದ ಒಡವೆ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: 11 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಶಿಕ್ಷಾಬಂಧಿ ಕೊನೆಗೂ ಅರೆಸ್ಟ್
ಕಳೆದ ಜನವರಿ 9 ರಂದು ತಿಪಟೂರು ತಾಲೂಕಿನ ಗೌಡನಹಟ್ಟಿ ಗ್ರಾಮದ ರಾಜೇಶ್ವರಿ ಸಂಬಂಧಿಕರ ಮನೆಗೆ ಬಸ್ನಲ್ಲಿ ಹೋಗಿದ್ದಾಗ ಅಲುವೇಲಮ್ಮ ಒಡವೆ ಕದ್ದಿದ್ದರು. ಹುಳಿಯಾರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ನಡೆದಿತ್ತು. ಆರೋಪಿ ಅಲುವೇಲಮ್ಮ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಡವೆ ಕಳ್ಳತನ ಮಾಡಿದ್ದಳು ಎನ್ನಲಾಗಿದೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.