AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​​ ಆರಂಭದಲ್ಲೇ ಮಧ್ಯ ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ: ಹಾವೇರಿ, ದಾವಣಗೆರೆಯಲ್ಲಿ ಹೆಚ್ಚಿದ ಉಷ್ಣಾಂಶ

ಕರ್ನಾಟಕದಲ್ಲಿ ಈ ವರ್ಷದ ಮುಂಗಾರು ಮಳೆ ಅಂತ್ಯದ ಅಂಚಿನಲ್ಲಿರುವ ಹೊತ್ತಲ್ಲಿಯೇ ಮಧ್ಯ ಕರ್ನಾಟಕದ ಜಿಲ್ಲೆಗಳಾದ ಹಾವೇರಿ ಹಾಗೂ ದಾವಣಗೆರೆಯಲ್ಲಿ ತಾಪಮಾನ ಭಾರಿ ಏರಿಕೆಯಾಗಿದ್ದು, ಬೇಸಿಗೆಯಂತಹ ವಾತಾವರಣ ಕಂಡುಬಂದಿದೆ. ಮಳೆ ಅಭಾವ ಹಾಗೂ ಬಿಸಿಲಿನಿಂದಾಗಿ ಕೃಷಿ ಬೆಳೆಗಳು ಒಣಗುವ ಆತಂಕ ರೈತರನ್ನು ಕಾಡತೊಡಗಿದೆ.

ಅಕ್ಟೋಬರ್​​ ಆರಂಭದಲ್ಲೇ ಮಧ್ಯ ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ: ಹಾವೇರಿ, ದಾವಣಗೆರೆಯಲ್ಲಿ ಹೆಚ್ಚಿದ ಉಷ್ಣಾಂಶ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Oct 06, 2026 | 3:24 PM

Share

ಹಾವೇರಿ/ದಾವಣಗೆರೆ, ಅಕ್ಟೋಬರ್​ 06: ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಮುಗಿಯುವ ಹಂತದಲ್ಲಿದ್ದು, ಅದಾಗಲೇ ರಾಜ್ಯದ ಮಧ್ಯ ಭಾಗದಲ್ಲಿ ಬೇಸಿಗೆಯ ವಾತಾವರಣ ಕಾಣಿಸಿಕೊಂಡಿದೆ. ಹಾವೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ಅಕ್ಟೋಬರ್ ಮೊದಲ ವಾರದ ಸಾಮಾನ್ಯ ತಾಪಮಾನಕ್ಕಿಂತ ಇದು ಸುಮಾರು 3 ಡಿಗ್ರಿ ಹೆಚ್ಚಾಗಿದೆ. ದಾವಣಗೆರೆಯಲ್ಲಿಯೂ ಸೋಮವಾರ (ಅ.5) 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಳೆಗಾಲ ಮುಗಿದು ಚಳಿ ಆರಂಭವಾಗುವ ಈ ಸಂದರ್ಭದಲ್ಲಿ ಸಾಮಾನ್ಯವಾಗಿ ವಾತಾವರಣದಲ್ಲಿ ತೇವಾಂಶ ಇರಬೇಕಿತ್ತು. ಆದರೆ, ಮೋಡಗಳ ಕೊರತೆ ಮತ್ತು ದೀರ್ಘಕಾಲದ ಬಿಸಿಲಿನಿಂದ ತಾಪಮಾನ ಹೆಚ್ಚಾಗಿರೋದು ಕಂಡುಬಂದಿದೆ.

ಸೆಪ್ಟೆಂಬರ್​​ನಲ್ಲಿ ಮಳೆಯ ಕೊರತೆ ತೀವ್ರ

ತೀವ್ರ ಮಳೆ ಕೊರತೆಯ ಪರಿಸ್ಥಿತಿಯ ನಡುವೆಯೇ ತೀವ್ರ ಬಿಸಿಲು ಕಾಣಿಸಿಕೊಂಡಿದೆ. ಜೂನ್ 1ರಿಂದ ಅಕ್ಟೋಬರ್ 1ರವರೆಗೆ ಹಾವೇರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.52ರಷ್ಟು ಕಡಿಮೆ ಮಳೆಯಾಗಿದೆ. ಜುಲೈನಲ್ಲಿ ಶೇ.40ರಷ್ಟು ಹಾಗೂ ಆಗಸ್ಟ್‌ನಲ್ಲಿ ಶೇ.39.9ರಷ್ಟು ಮಳೆ ಕೊರತೆ ದಾಖಲಾಗಿದೆ. ಸಾಮಾನ್ಯವಾಗಿ ಹೆಚ್ಚಿನ ತೇವಾಂಶ ಇರುವ ಸೆಪ್ಟೆಂಬರ್ ತಿಂಗಳಲ್ಲೂ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಕಂಡುಬಂದಿದೆ. ಸೆಪ್ಟೆಂಬರ್ 1ರಿಂದ 30ರವರೆಗೆ ಕೇವಲ 16 ಮಿ.ಮೀ ಮಳೆಯಾಗಿದ್ದು, ವಾಡಿಕೆ 85 ಮಿ.ಮೀ ಆಗಿತ್ತು. ಸೆಪ್ಟೆಂಬರ್ 2ರಂದು ಅಲ್ಲಲ್ಲಿ ತುಂತುರು ಮಳೆಯಾಗಿದ್ದನ್ನು ಹೊರತುಪಡಿಸಿದರೆ, ಬಹುತೇಕ ದಿನಗಳು ಒಣಹವೆಯಿಂದ ಕೂಡಿದ್ದವು.

LIVE TV

ಇದನ್ನೂ ಓದಿ: ಕರ್ನಾಟಕ ಹವಾಮಾನ ಮುನ್ಸೂಚನೆ;  3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಇದರ ಪರಿಣಾಮ ಕೃಷಿ ಪ್ರದೇಶಗಳಲ್ಲೂ ಗೋಚರಿಸುತ್ತಿದ್ದು, ಮಣ್ಣಿನ ತೇವಾಂಶ ಕಡಿಮೆಯಾಗುತ್ತಿರುವುದರಿಂದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ದುರ್ಬಲವಾಗಿದ್ದರೂ ರೈತರು ಮೆಕ್ಕೆಜೋಳ ಮತ್ತು ರಾಗಿ ಬಿತ್ತನೆ ಮಾಡಿದ್ದರು. ಆದರೆ, ಇದೀಗ ಎರಡೂ ಬೆಳೆಗಳಿಗೆ ತುರ್ತಾಗಿ ಮಳೆಯ ಅಗತ್ಯವಿದ್ದು, ಹೆಚ್ಚುತ್ತಿರುವ ತಾಪಮಾನದಿಂದ ಬೆಳೆಗಳು ಹಾನಿಗೊಳಗಾಗುವ ಆತಂಕ ಎದುರಾಗಿದೆ. ಬಿಸಿಲು ಹಾಗೂ ಮಣ್ಣಿನ ತೇವಾಂಶದ ಕೊರತೆಯಿಂದ ಬೆಳೆಗಳು ಒಣಗಿ ಹೋಗುವ ಸಾಧ್ಯತೆ ಹೆಚ್ಚಿದ್ದು, ಇಳುವರಿ ಕುಸಿದು ರೈತರಿಗೆ ನಷ್ಟ ಉಂಟಾಗಬಹುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ಎಚ್ಚರಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್