AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ; ಡಿಡಿಪಿಐ ಸೂಚನೆ ಮೇರೆಗೆ ಬೇರೆ ಶಾಲೆಗೆ ವರ್ಗಾವಣೆ

ಇಂದು (ಜನವರಿ 01) ಡಿಡಿಪಿಐ ಬೇರೆ ಶಾಲೆಗೆ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡುವಂತೆ ಬಿಇಓಗೆ ಸೂಚನೆ ನೀಡಿದ್ದಾರೆ. ಅದರಂತೆ ಶಾಲಾ‌ ಮುಖ್ಯೋಪಾಧ್ಯಾಯರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಬಿಇಓ ಆದೇಶ ನೀಡಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ; ಡಿಡಿಪಿಐ ಸೂಚನೆ ಮೇರೆಗೆ ಬೇರೆ ಶಾಲೆಗೆ ವರ್ಗಾವಣೆ
ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ
TV9 Web
| Updated By: preethi shettigar|

Updated on:Jan 01, 2022 | 9:55 AM

Share

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ವಿರುದ್ಧ ನಿನ್ನೆ ರಾತ್ರಿವರೆಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯೋಪಾಧ್ಯಾಯರಾದ ಫಕ್ಕೀರಪ್ಪ ಬಾಲಹನುಮಣ್ಣನವರ ಎಂಬುವವರ ವಿರುದ್ಧ ಪ್ರತಿಭಟನೆ (Protest) ನಡೆಸಿದ್ದ ಗ್ರಾಮಸ್ಥರು ಶಾಲೆಯಿಂದ ಅಮಾನತ್ತು ಮಾಡಿ ಅಥವಾ ಬೇರೆ ಶಾಲೆಗೆ (School) ವರ್ಗಾವಣೆ ಮಾಡಿ ಎಂದು ಒತ್ತಾಯಿಸಿದ್ದರು. ಈ ಮೇರೆಗೆ ಇಂದು (ಜನವರಿ 01) ಡಿಡಿಪಿಐ ಬೇರೆ ಶಾಲೆಗೆ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡುವಂತೆ ಬಿಇಓಗೆ ಸೂಚನೆ ನೀಡಿದ್ದಾರೆ. ಅದರಂತೆ ಶಾಲಾ‌ ಮುಖ್ಯೋಪಾಧ್ಯಾಯರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಬಿಇಓ ಆದೇಶ ನೀಡಿದ್ದಾರೆ.

ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯರನ್ನು ಹಾನಗಲ್ ತಾಲೂಕಿನ‌ ಹೋತನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜಿಸಿ ಬಿಇಓ (ಹಾನಗಲ್ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ) ಆದೇಶ ನೀಡಿದ್ದಾರೆ.

ಗ್ರಾಮಸ್ಥರ ಪ್ರತಿಭಟನೆಗೆ ಕಾರಣ ಏನು? ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ಅವರು ಶಾಲೆಗೆ ಸರಿಯಾಗಿ ಬರುವುದಿಲ್ಲ. ಹೀಗಾಗಿ ಅಮಾನತ್ತು ಮಾಡಿ ಎಂದು ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ವಿರುದ್ಧ ಶಾಲೆಗೆ ಸರಿಯಾಗಿ ಬರುವುದಿಲ್ಲ ಹಾಗೂ ಶಾಲೆಗೆ ಮದ್ಯಪಾನ ಮಾಡಿ ಬರುತ್ತಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಶಾಲೆಗೆ ಬಾರದೆ ಮನಸ್ಸೋ ಇಚ್ಛೆ ಶಾಲೆಗೆ ಬರುವ ಇಂತಹ ಮುಖ್ಯೋಪಾಧ್ಯಾಯರು ನಮ್ಮ ಶಾಲೆಗೆ ಬೇಡ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.

ಕೆಲವು ವರ್ಷಗಳಿಂದ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿರುವ ಫಕ್ಕೀರಪ್ಪ ಬಾಲಹನುಮಣ್ಣನವರ ಅವರನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಬಂದು ಅಮಾನತ್ತು ಅಥವಾ ವರ್ಗಾವಣೆಯ ಆದೇಶ ನೀಡಬೇಕು ಅಲ್ಲಿಯವರೆಗೂ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು  ಗ್ರಾಮಸ್ಥರು ತಿಳಿಸಿದ್ದರು. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಮಾಡುವಂತೆ ಒತ್ತಾಯ; ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ

Published On - 9:51 am, Sat, 1 January 22

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?