
ಹಾವೇರಿ, ಡಿಸೆಂಬರ್ 27: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ. ಮೆಡಿಸಿನ್ ಓವರ್ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆ ಪಕ್ಕಕ್ಕೆ ವಾಲಿದ್ದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಡ್ಲಾಪುರ ಗ್ರಾಮದ ಬಳಿ ನಡೆದಿತ್ತು. ಬಂಕಾಪುರ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಹೂಲಿಕಟ್ಟಿಯಿಂದ ಬಂಕಾಪುರಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿತ್ತು. ರಾತ್ರಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಆಗಿದ್ದರಿಂದ ರಸ್ತೆಯಲ್ಲಿ ಟೈರ್ ಸ್ಕಿಡ್ ಆಗಿ ಬಸ್ ರಸ್ತೆ ಪಕ್ಕಕ್ಕೆ ವಾಲಿತ್ತು.
ಇದನ್ನೂ ಓದಿ: ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆ
ಬಸ್ಸಿನಲ್ಲಿ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳು ಆಗಿಲ್ಲ. ಬಸ್ಸಿನಲ್ಲಿದ್ದ ಎಲ್ಲರೂ ಅದೃಷ್ಟವಶಾತ್ ಪಾರಾಗಿದ್ದರು. ಬಸ್ ಸ್ವಲ್ಪದರಲ್ಲೇ ಸಣ್ಣ ಕಾಲುವೆಗೆ ಉರುಳಿ ಬೀಳುವುದು ತಪ್ಪಿತ್ತು. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿತ್ತು. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಲ್ಲಪ್ಪನಹೊಸಹಳ್ಳಿ ಗ್ರಾಮದಲ್ಲಿ ಹೆಜ್ಜೇನು ಹುಳು ಕಚ್ಚಿ ಓರ್ವ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದೋಳಿಬಾಯಿ(49) ಮೃತ ಮಹಿಳೆ. ಮೂರು ದಿನಗಳ ಹಿಂದೆ ತೋಟಕ್ಕೆ ಹೋದಾಗ ಹೆಜ್ಜೇನು ದಾಳಿ ಮಾಡಿ ಕಚ್ಚಿತ್ತು.
ಇದನ್ನೂ ಓದಿ: ಮೂತ್ರ ವಿಸರ್ಜನೆ ವಿಚಾರಕ್ಕೆ ಕಿರಿಕ್: ಯುವಕರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ ಸ್ಥಳೀಯ ಗ್ಯಾಂಗ್
ಖಾಸಗಿ ಆಸ್ಪತ್ರೆಯಲ್ಲಿ ದೂಳಿಬಾಯಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಸದ್ಯ ಈಸ್ಟ್ ಪಾಯಿಂಟ್ ಆಸ್ಪತ್ರೆಯಲ್ಲಿ ಮೃತದೇಹ ಇದೆ.
ವರದಿ: ಅಣ್ಣಪ್ಪ ಬಾರ್ಕಿ
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.