AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ: ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹಾರುವುದು ಪಕ್ಕಾ ಆಗಿದೆ. ಕೊನೆಗೂ ಅಳೆದು ತೂಗಿ ಅವರು ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ಇನ್ನು ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ದರೆ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಎನ್ನುವುದನ್ನು ಕಾಂಗ್ರೆಸ್ ಶಾಸಕ ಎಚ್​ಸಿ ಬಾಲಕೃಷ್ಣ ವಿಡಂಬನಾತ್ಮಕವಾಗಿ ಹೇಳಿದ್ದಾರೆ. ಅಲ್ಲದೇ ಬಿಜೆಪಿ ನಾಯಕ ಯೋಗೇಶ್ವರ್​ಗೆ ಕಾಂಗ್ರೆಸ್​ಗೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ: ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ
ಬಾಲಕೃಷ್ಣ, ಸಿಪಿ ಯೋಗೇಶ್ವರ್
TV9 Web
| Edited By: |

Updated on: Mar 26, 2024 | 4:50 PM

Share

ರಾಮನಗರ, (ಮಾರ್ಚ್ 26): ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ (HD Kumaraswamy) ಕೊನೆಗೆ ಮಂಡ್ಯ ಲೋಕಸಭಾ (Mandya Loksabha) ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದು, ಇನ್ನು ಕೆಲ ಹೊತ್ತಿನಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಶಾಸಕ ಎಚ್​ಸಿ ಬಾಲಕೃಷ್ಣ ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಕುಮಾರಸ್ವಾಮಿ ಮಂಡ್ಯದಲ್ಲಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ ಪರೋಕ್ಷವಾಗಿ ಬಿಜೆಪಿ ಕಾರ್ಯಕರ್ತರು ಮತ್ತು ಸಿ.ಪಿ.ಯೋಗೇಶ್ವರ್​ಗೆ (HC Balakrishna)​  ಕಾಂಗ್ರೆಸ್​​ಗೆ ಆಹ್ವಾನ ನೀಡಿದ್ದಾರೆ.

ಇಂದು (ಮಾರ್ಚ್ 26) ರಾಮನಗರದ ಮಾಗಡಿಯಲ್ಲಿ ಮಾತನಾಡಿದ ಎಚ್​ಸಿ ಬಾಲಕೃಷ್ಣ, ಚನ್ನಪಟ್ಟಣದಲ್ಲಿ ನಿಖಿಲ್ ನಿಲ್ಲಿಸಬೇಕು ಅಂತ ಕುಮಾರಸ್ವಾಮಿ ಹೋಂ ಮಿನಿಸ್ಟರ್ ಆದೇಶ ಆಗಿದೆ. ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಇವರನ್ನ ಒದ್ದು ಓಡಿಸೋಣ ಎಂದು ಅವರು, ಅವರನ್ನ ಒದ್ದು ಓಡಿಸೋಣ ಅಂತ ಇವರು ನಿಂತಿದ್ದಾರೆ. ಕೊನೆಗೆ ಕಾರ್ಯಕರ್ತರ ಕಥೆ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್, ಅಧಿಕೃತ ಘೋಷಣೆಯೊಂದೇ ಬಾಕಿ

ಸಿಪಿ ಯೋಗೇಶ್ವರ್​ಗೆ ಕಾಂಗ್ರೆಸ್​ಗೆ ಆಹ್ವಾನ

ಇವರೇನೋ ಎಲ್ಲೋ ಹೋಗಿ ಅಡ್ಜಸ್ಟ್ ಆಗುತ್ತಾರೆ. ಆದ್ರೆ, ಕಾರ್ಯಕರ್ತರ ಕಥೆ ಏನು.? ಕಾರ್ಯಕರ್ತರು ನಿಜವಾಗಿಯೂ ಬಲಿಪಶು ಆಗುತ್ತಾರೆ. ಈಗಲೇ ಚನ್ನಪಟ್ಟಣ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು. ಉಪಚುನಾವಣೆ ಆದ್ರೆ ಯೋಗೇಶ್ವರ್ ಗೆ ಟಿಕೆಟ್ ಸಿಗಲ್ಲ. ಈಗಲೇ ಅವರ ಕಾರ್ಯಕರ್ತರು ಕಾಂಗ್ರೆಸ್​ ಗೆ ಬನ್ನಿ, ನಿಮ್ಮ ನಾಯಕರು ಬಂದ್ರು ಒಳ್ಳೆಯದೇ, ಈಗಲೇ ಬಂದ್ರೆ ನಿಮ್ಮಲ್ಲೇ ಯಾರಾದ್ರೂ ಎಂಎಲ್ಎ ಆಗಬಹುದು ಎಂದು ಪರೋಕ್ಷವಾಗಿ ಸಿ.ಪಿ.ಯೋಗೇಶ್ವರ್​ ಅವರನ್ನು ಕಾಂಗ್ರೆಸ್​​ಗೆ ಆಹ್ವಾನ ನೀಡಿದರು.

ಡಿ‌ಕೆ ಬ್ರದರ್ಸ್ ರಕ್ತ ಚರಿತ್ರೆ ಉಳ್ಳವರು ಎಂಬ ಸಿಪಿ ಯೋಗೇಶ್ವರ ಹೇಳಿಕೆ‌ಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ಸಿಪಿ ಯೋಗೇಶ್ವರ್ ಗೆ ಅದರ ಅನುಭವ ಆಗಿದ್ಯಾ. ಕನಕಪುರ ಎಲ್ಲಾ ಓಡಾಡಿಕೊಂಡು ಬಂದಿದ್ದಾರೆ. ಎಲ್ಲಾದರು ಅನುಭವ ಆಗಿದ್ಯಾ.? ಅಪ ಪ್ರಚಾರ ಮಾಡಲು ಇತಿಮಿತಿ ಇರಬೇಕು. ಅವರಿಗೆ ತಲೆ ಕೆಟ್ಟುಹೋಗಿದೆ ಎಂದು ತಿರುಗೇಟು ನೀಡಿದರು.

ಅರೆ ಮಿಲಿಟರಿ ಪಡೆ ಬಂದು ಚುನಾವಣೆ ಮಾಡಬೇಕು ಎನ್ನುತ್ತಾರೆ. ಅಭಿವೃದ್ಧಿ ವಿಚಾರ ಮಾತಾಡಿ ಮತ ಗಿಟ್ಟಿಸಿಕೊಳ್ಳುತ್ತಿಲ್ಲ. ಅಪಪ್ರಚಾರ ಮಾಡಿ‌ ಮತ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜನ ಬುದ್ದಿವಂತರಿದ್ದಾರೆ. ಯಾರು ಅಭಿವೃದ್ಧಿ ಮಾಡ್ತಾರೆ ಎಂಬುದು ಗೊತ್ತು. ಜನ ಇದಕ್ಕೆ ಉತ್ತರ ಕೊಡುತ್ತಾರೆ. ನಾನು ಮುನಿರತ್ನ, ಸಿಪಿ ಯೋಗೇಶ್ವರ್ ಇಬ್ಬರಿಗೂ ಹೇಳುತ್ತೇನೆ ಅಭಿವೃದ್ಧಿ ಬಗ್ಗೆ ಚರ್ಚೆ ಆಗಲಿ. ಅವರು ಅಭ್ಯರ್ಥಿಯನ್ನು ಕರೆದುಕೊಂಡು ಬರುತ್ತಾರಾ ಕೇಳಿ ಎಂದು ಸವಾಲು ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು