ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Sep 25, 2023 | 5:58 PM

Bengaluru Bandh: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್
ಹೈಕೋರ್ಟ್​
Follow us on

ಬೆಂಗಳೂರು, ಸಪ್ಟೆಂಬರ್​​ 25: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಪರ ಎಜಿ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ (Ravikumar Kanchanahalli) ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಅರ್ಜಿದಾರರ ಪರ ವಕೀಲ‌ ಜಿ.ಆರ್.ಮೋಹನ್​ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

ತಮಿಳುನಾಡಿಗೆ ಕಾವೇರಿ ನೀರು ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ ಕರೆ ನೀಡಿದರೆ, ಹೋರಾಟಗಾರ ವಾಟಾಳ್​​ ನಾಗರಾಜ ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರೆಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಬಂದ್​ಗೆ ಬೆಂಬಲ ಸೂಚಿಸಿದ ರಾಜ್ಯ ಹೋಟೆಲ್ ಮಾಲೀಕರ ಸಂಘ

ರಾಜ್ಯ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿಕೆ ನೀಡಿದ್ದು, ನಾಳೆ ಸಂಪೂರ್ಣವಾಗಿ ಹೋಟೆಲ್ ಬಂದ ಆಗಲಿವೆ. ನಾವು ನಾಳಿನ ಬಂದ್​ಗೆ ಬೆಂವಲ ಕೊಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Mon, 25 September 23