ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ; ಹೆಚ್.ಡಿ.ಕುಮಾರಸ್ವಾಮಿ ಸಲಹೆ

ರಾಜ್ಯದಲ್ಲಿ ಯಾವುದೇ ಹಣಕಾಸು ಸಮಸ್ಯೆ ಎದುರಾಗಲ್ಲ. ಸರ್ಕಾರ ಹಣ ಹೊಂದಿಸಿ ನೆರವು ನೀಡಲು ಅವಕಾಶವಿದೆ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಹೊಂದಿಸಿದ್ದೆ. ನನಗೆ ಸಹಕಾರ ಇಲ್ಲದಿದ್ದರೂ ಹಣವನ್ನು ಹೊಂದಿಸಿದ್ದೆ. ರೈತರ ಸಾಲ ಮನ್ನಾ ಮಾಡಲು ಹಣವನ್ನು ಹೊಂದಿಸಿದ್ದೆ.

ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ; ಹೆಚ್.ಡಿ.ಕುಮಾರಸ್ವಾಮಿ ಸಲಹೆ
ಎಚ್​ ಡಿ ಕುಮಾರಸ್ವಾಮಿ
Follow us
sandhya thejappa
|

Updated on:May 17, 2021 | 1:02 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ವಾರ ಅಲ್ಲದಿದ್ದರೆ ಒಂದು ತಿಂಗಳು ವಿಸ್ತರಣೆ ಮಾಡಲಿ. ಆದರೆ ರಾಜ್ಯ ಸರ್ಕಾರ ಬಡವರ್ಗಕ್ಕೆ ನೆರವು ನೀಡಬೇಕು. ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು. ಈ ವರ್ಷ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿಬಿಡಿ. ಈ ವರ್ಷ ಪೂರ್ತಿ ನಿಗಮ ಮಂಡಳಿಗಳನ್ನು ರದ್ದು ಮಾಡಲಿ. ಇದರಿಂದ ಬರುವ ಹಣದಿಂದ ಬಡವರಿಗೆ ನೆರವು ನೀಡಲಿ ಎಂದು ರಾಜ್ಯ ಸರ್ಕಾರಕ್ಕೆ ಟಿವಿ 9 ಮೂಲಕ ಸಲಹೆ ನೀಡಿದರು.

ರಾಜ್ಯದಲ್ಲಿ ಯಾವುದೇ ಹಣಕಾಸು ಸಮಸ್ಯೆ ಎದುರಾಗಲ್ಲ. ಸರ್ಕಾರ ಹಣ ಹೊಂದಿಸಿ ನೆರವು ನೀಡಲು ಅವಕಾಶವಿದೆ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಹೊಂದಿಸಿದ್ದೆ. ನನಗೆ ಸಹಕಾರ ಇಲ್ಲದಿದ್ದರೂ ಹಣವನ್ನು ಹೊಂದಿಸಿದ್ದೆ. ರೈತರ ಸಾಲ ಮನ್ನಾ ಮಾಡಲು ಹಣವನ್ನು ಹೊಂದಿಸಿದ್ದೆ. ಆದರೆ ಈಗ ಏಕೆ ಹಣ ಹೊಂದಿಸುವುದಕ್ಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಜೊತೆಗೆ ಕಾಂಗ್ರೆಸ್​ನವರು ವ್ಯಾಕ್ಸಿನ್ ಬಗ್ಗೆ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್​ನವರಿಂದಲೇ ವ್ಯಾಕ್ಸಿನ್ಗಾಗಿ ಪ್ರತಿಭಟನೆ ಮಾಡುತ್ತಾರೆ. ಕೊರೊನಾ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ಇನ್ನು ಲಾಕ್​ಡೌನ್​ ವಿಸ್ತರಣೆ ಬಗ್ಗೆ ಕುಮಾಸ್ವಾಮಿ ಟ್ವೀಟ್ ಕೂಡಾ ಮಾಡಿದ್ದಾರೆ. ಸರ್ಕಾರ ಲಾಕ್​ಡೌನ್​ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್​ಡೌನ್​ ವಿಸ್ತರಿಸುವುದಾದರೆ ಅದು ಜನಹಿತದ ಲಾಕ್​ಡೌನ್​ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್​ಡೌನ್​ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್​ಡೌನ್​’ ಕಲ್ಪನೆಯೇ ಆಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಲಾಕ್​ಡೌನ್​ ಹೇಗಿದೆ? ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್​ಡೌನ್​ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಟ್ವಿಟರ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಹರ್ಯಾಣದ ಹಿಸಾರ್​ನಲ್ಲಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು #Modiji_cancel12thboards ಹ್ಯಾಶ್​ಟ್ಯಾಗ್​; ಪ್ರಧಾನಿ ಮೋದಿಗೆ ಸಿಬಿಎಸ್​ಇ ಕ್ಲಾಸ್​ 12 ವಿದ್ಯಾರ್ಥಿಗಳ ಮೊರೆ

(HC Kumaraswamy said lockdown would continue for Corona control in Karnataka)

Published On - 1:02 pm, Mon, 17 May 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು