HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ; ಟ್ವೀಟ್ ಮೂಲಕ ಶುಭ ಹಾರೈಸಿದ ಬಿ.ಎಸ್ ಯಡಿಯೂರಪ್ಪ
Happy Birthday HD Devegowda: ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.ಮೇ 18ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರು 89ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.
ಹಿರಿಯ ಮತ್ತು ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ನಿಮಗಿರಲಿ ಎಂದು ಮುಂಖ್ಯಮಮತ್ರಿ ಬಿ.ಎಸ್ ಯಡಿಯೂರಪ್ಪನವರು ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.
ಹಿರಿಯರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ.@H_D_Devegowda pic.twitter.com/zeQU4abfIG
— B.S. Yediyurappa (@BSYBJP) May 18, 2021
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ದೇವೇಗೌಡರಿಗೆ ಶುಭ ಹಾರೈಸಿದ್ದು, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್.ಡಿ.ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳು. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ದಿಗಲಿ ಎಂದು ಹಾರೈಸಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್.ಡಿ.ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಆಯುಷ್ಯ, ಆರೋಗ್ಯ ನಿಮ್ಮದಾಗಲಿ. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ಸಿಗಲಿ. pic.twitter.com/wMrjXfQfAM
— Siddaramaiah (@siddaramaiah) May 18, 2021
ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸದೇ ತಮ್ಮ ಹತ್ತಿರದ ಕೊವಿಡ್ ಸೋಂಕಿತರ ಆರೈಕೆ ಮತ್ತು ನೆರವಿಗೆ ಸಹಾಯ ಮಾಡಬೇಕೆಂದು ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಎರಡು ದಿನಗಳ ಹಿಂದೆಯೇ ಕೋರಿದ್ದರು. ಸದ್ಯ ಕೊವಿಡ್ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದರು.
ಇದನ್ನೂ ಓದಿ: ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ
Published On - 11:16 am, Tue, 18 May 21