HD Deve Gowda Birthday: ಮಣ್ಣಿನ ಮಗ ದೇವೇಗೌಡರ ಜನ್ಮದಿನಕ್ಕೆ ಪ್ರಧಾನಿ ಸೇರಿದಂತೆ ಹಲವರ ಶುಭಾಶಯ

ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು(HD Deve Gowda) ಮಣ್ಣಿನ ಮಗ ಎಂದೆ ಪ್ರಖ್ಯಾತಿ. ರೈತರ ಅಳುವಿಗೆ ಧ್ವನಿ ಕೊಟ್ಟ ನೇಕಾರ, ಹೌದು ಒಂದು ಸಣ್ಣ ಹಳ್ಳಿಯಿಂದ ದೇಶದ ಪ್ರಧಾನ ಮಂತ್ರಿ ಹುದ್ದೆಯನ್ನ ಅಲಂಕರಿಸಿದ್ದ ನಾಯಕ ಇಂದು(ಮೇ.18) 91ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇವರಿಗೆ ಹಲವಾರು ಶುಭಾಶಯಗಳು ಬರುತ್ತಿದ್ದು, ಯಾರ್ಯಾರು ಶುಭಾಶಯ ಕೋರಿದ್ದಾರೆ ಇಲ್ಲಿದೆ ನೋಡಿ.

HD Deve Gowda Birthday: ಮಣ್ಣಿನ ಮಗ ದೇವೇಗೌಡರ ಜನ್ಮದಿನಕ್ಕೆ ಪ್ರಧಾನಿ ಸೇರಿದಂತೆ ಹಲವರ ಶುಭಾಶಯ
ಹೆಚ್​ ಡಿ ದೇವೇಗೌಡ ಅವರ ಹುಟ್ಟಿದ ದಿನ ಶುಭಾಶಯಗಳ ಮಹಾಪೂರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 18, 2023 | 10:32 AM

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು(HD Deve Gowda) ಮಣ್ಣಿನ ಮಗ ಎಂದೆ ಪ್ರಖ್ಯಾತಿ. ರೈತರ ಅಳುವಿಗೆ ಧ್ವನಿ ಕೊಟ್ಟ ನೇಕಾರ, ಹೌದು ಒಂದು ಸಣ್ಣ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನ ಅಲಂಕರಿಸುವ ಮಟ್ಟಕ್ಕೆ ಬೆಳೆದಿರುವ ನಾಯಕ. ಇಂದು(ಮೇ 18) ಅವರು 91ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕಂತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀ ದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು.

ದೇಶದ ಪ್ರಧಾನಿಯಾಗುವ ಮೂಲಕ ಕರ್ನಾಟಕದ ಕೀರ್ತಿಯನ್ನ ದೇಶಕ್ಕೆ ಪರಿಚಯಿಸಿದ್ದ ದೇವೇಗೌಡರು. ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಹೆಚ್​ಡಿ ದೇವೇಗೌಡ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

ಇದನ್ನೂ ಓದಿ: HD Deve Gowda Birthday: ಪ್ರಧಾನಿಯಾದ ಏಕೈಕ ಕನ್ನಡಿಗ ಹೆಚ್​ಡಿ ದೇವೇಗೌಡರ ಅಪರೂಪದ ಚಿತ್ರಗಳು

ದೇಶಕಂಡ ಮಣ್ಣಿನ ಮಗನಿಗೆ ಹಲವು ರಾಜಕಾರಣಿಗಳ ಶುಭಾಶಯಗಳ ಮಹಾಪೂರ

ಶುಭಾಶಯ ಕೋರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟ್ವಿಟ್​ ಮೂಲಕ ಮಾಜಿ ಪ್ರಧಾನಿ ಮಂತ್ರಿ ಹೆಚ್​ಡಿ ದೇವೇಗೌಡ ಅವರಿಗೆ ಶುಭಾಶಯ ಕೋರಿದ್ದಾರೆ ‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ

ಟ್ವಿಟ್​ ಮೂಲಕ ಶುಭಾಶಯ ಕೋರಿದ ಬಸವರಾಜ ಬೊಮ್ಮಾಯಿ ಅವರು ‘ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್​.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ತಂದೆಗೆ ಶುಭಕೋರಿದ ಮಗ ಹೆಚ್​ಡಿ ಕುಮಾರಸ್ವಾಮಿ

ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್​ ಡಿ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಪಕ್ಷದ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ರಿಲ್ಯಾಕ್ಸ್ ಮೂಡಲ್ಲಿ ಜಿಟಿ ದೇವೇಗೌಡ: ಮೊಮ್ಮಕ್ಕಳ ಜೊತೆ ಕ್ರಿಕೆಟ್​​ ಆಡಿದ ಜೆಡಿಎಸ್ ಅಭ್ಯರ್ಥಿ

ಶುಭಕೋರಿದ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ

‘ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಶುಭಾಶಯ ಹೇಳಿದ ಕಾಂಗ್ರೆಸ್​ನ ಮಾಜಿ ಸಚಿವ ಎಂ ಬಿ ಪಾಟೀಲ್​

‘ಹಿರಿಯ ಮುತ್ಸದ್ಧಿ , ಮಾಜಿ ಪ್ರಧಾನಮಂತ್ರಿಗಳಾದ, ಸನ್ಮಾನ್ಯ ಶ್ರೀ ಹೆಚ್​ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಅನುಗ್ರಹ ಸದಾ ಅವರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ. ನಾಡು, ನುಡಿ, ನೆಲ, ಜಲದ ಬಗೆಗೆ ಅವರಿಗಿರುವ ಕಾಳಜಿ ಹಾಗೂ ಜವಾಬ್ದಾರಿಯುತ ನಡೆ ಎಲ್ಲರಿಗೂ ಮಾದರಿಯಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Thu, 18 May 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ