ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮೌನ ಮುರಿದ ದೇವೇಗೌಡ: ಜೆಡಿಎಸ್ ವರಿಷ್ಠ ಹೇಳಿದ್ದೇನು?

| Updated By: Ganapathi Sharma

Updated on: May 18, 2024 | 10:24 AM

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ದೇವೇಗೌಡರು ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ದೇವರಾಜೇಗೌಡ ಹೇಳಿಕೆ, ಡಿಕೆ ಶಿವಕುಮಾರ್ ಕುರಿತ ಆರೋಪ ಇತ್ಯಾದಿಗಳೆಲ್ಲದರ ಬಗ್ಗೆ ಅವರು ಮಾತನಾಡಿದ್ದು, ಆ ವಿವರ ಇಲ್ಲಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮೌನ ಮುರಿದ ದೇವೇಗೌಡ: ಜೆಡಿಎಸ್ ವರಿಷ್ಠ ಹೇಳಿದ್ದೇನು?
ಹೆಚ್​​​ಡಿ ದೇವೇಗೌಡ
Follow us on

ಬೆಂಗಳೂರು, ಮೇ 18: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ (JDS) ವರಿಷ್ಠ ಹೆಚ್​​​ಡಿ ದೇವೇಗೌಡ (HD Deve Gowda) ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದು ದೇವೇಗೌಡ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಜರ್ಮಿನಿಯಿಂದ ಲಂಡನ್‌ಗೆ ಪರಾರಿಯಾದ ಪ್ರಜ್ವಲ್​ ರೇವಣ್ಣ

ದೇವರಾಜೇಗೌಡ ಏನು ಹೇಳಿದ್ದಾರೆಂದು ಮಾಧ್ಯಮದಲ್ಲಿ ನೋಡಿದ್ದೇವೆ. ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕಡೆ ನಾನು ಪ್ರಚಾರ ಮಾಡಿದ್ದೇನೆ. ಚುನಾವಣಾ ಫಲಿತಾಂಶ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇನೆ. ಅಲ್ಲಿಯವರೆಗೆ ನಾನು ಯಾರನ್ನೂ ಭೇಟಿ ಮಾಡಲ್ಲ ಎಂದು ಅವರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:43 am, Sat, 18 May 24