AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಟೌನ್​ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!

ಬಿಡದಿ ಟೌನ್​ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!

ಪ್ರಶಾಂತ್​ ಬಿ.
| Edited By: |

Updated on: Aug 10, 2026 | 1:55 PM

Share

ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿದರು. 'ದೇಹಕ್ಕಷ್ಟೇ ವಯಸ್ಸಾಗಿದೆ, ಬುದ್ಧಿಗಲ್ಲ' ಎಂದ ಅವರು, ರೈತರ ಪರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವೆ. ಪ್ರಾಯಶ್ಚಿತ್ತ ಯಾರಿಗೆ ಆಗಲಿದೆ ಎಂಬುದಾಗಿ ಕಾದು ನೋಡಿ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ರಾಮನಗರ, ಆಗಸ್ಟ್ 10: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಎರಡನೇ ದಿನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿ ಕಾಂಗ್ರೆಸ್​​ಗೆ ಟಾಂಗ್ ನೀಡಿದರು. ‘ಟಿವಿ9’ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್ ಪಾದಯಾತ್ರೆಯನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು. ಕಾಂಗ್ರೆಸ್ ಸರ್ಕಾರದ ಈ ನಡವಳಿಕೆಯಿಂದ ಮುಂಬರುವ ದಿನಗಳಲ್ಲಿ ಯಾರಿಗೆ ಹಾನಿಯಾಗಲಿದೆ ಎಂಬುದನ್ನು ಕಾಲವೇ ಉತ್ತರಿಸಲಿದೆ. ತಾವು ರೈತನ ಮಗನಾಗಿ ಹುಟ್ಟಿದ್ದು, ತಮ್ಮ ಜೀವನ ಪೂರ್ತಿ ರೈತರ ಪರವಾಗಿಯೇ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ನನ್ನ ದೇಹಕ್ಕೆ ವಯಸ್ಸಾಗಿದೆ ಆದರೆ ಬುದ್ಧಿಗಲ್ಲ. ವ್ಹೀಲ್​ಚೇರ್‌ನಲ್ಲಾದರೂ ಸರಿ, ರೈತರ ನ್ಯಾಯಕ್ಕಾಗಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us