ಕುಟುಂಬವೊಂದಕ್ಕೆ ಕುಡಿಯುವ ನೀರಿಗೆ 20000 ರೂ! ಬೆಂಗಳೂರು ಟ್ಯಾಂಕರ್ ಮಾಫಿಯಾ ಬಗ್ಗೆ ರಾಜ್ಯಸಭೆಯಲ್ಲಿ ಧ್ವನಿಯೆತ್ತಿದ ದೇವೇಗೌಡ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಬೆಂಗಳೂರಿನ ನೀರಿನ ತೀವ್ರ ಸಮಸ್ಯೆ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ನಾಲ್ಕು ಜನರ ಕುಟುಂಬವೊಂದು ತಿಂಗಳಿಗೆ 20,000 ರೂ.ಗಳನ್ನು ನೀರಿಗಾಗಿ ಖರ್ಚು ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ. ಟ್ಯಾಂಕರ್ ಮಾಫಿಯಾದಿಂದ ಜನರು ಸುಲಿಗೆಗೆ ಒಳಗಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದು, ಮೇಕೆದಾಟು ಯೋಜನೆಯ ಅನುಷ್ಠಾನದ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕುಟುಂಬವೊಂದಕ್ಕೆ ಕುಡಿಯುವ ನೀರಿಗೆ 20000 ರೂ! ಬೆಂಗಳೂರು ಟ್ಯಾಂಕರ್ ಮಾಫಿಯಾ ಬಗ್ಗೆ ರಾಜ್ಯಸಭೆಯಲ್ಲಿ ಧ್ವನಿಯೆತ್ತಿದ ದೇವೇಗೌಡ
ಹೆಚ್​ಡಿ ದೇವೇಗೌಡ
Follow us
Ganapathi Sharma
|

Updated on: Dec 05, 2024 | 12:30 PM

ನವದೆಹಲಿ, ಡಿಸೆಂಬರ್ 5: ಬೆಂಗಳೂರಿನಲ್ಲಿ ನಾಲ್ವರಿರುವ ಕುಟುಂಬವೊಂದು ಕುಡಿಯುವ ನೀರಿಗೆ ಒಂದು ತಿಂಗಳಿಗೆ 20,000 ರೂ. ವ್ಯಯಿಸಬೇಕಾದ ಸ್ಥಿತಿ ಇದೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ಬಗ್ಗೆ ರಾಜ್ಯಸಭೆಯಲ್ಲಿ ದನಿಯೆತ್ತಿದ ಅವರು, ಕರ್ನಾಟಕ ರಾಜಧಾನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದರು.

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರದ ಗಮನ ಸೆಳೆದರು.

ಮೇಕೆದಾಟು ಪರ ರಾಜ್ಯಸಭೆಯಲ್ಲಿ ದೇವೇಗೌಡರ ಆಗ್ರಹ

ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ದೇವೇಗೌಡರು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು.

ಟ್ಯಾಂಕರ್ ಮಾಫಿಯಾ ಬಗ್ಗೆ ಕಳವಳ

ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿ ಹೇಳಿದರು.

1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ 3000 ರೂ. ತೆರಬೇಕಿದೆ. ಇದು ಎಷ್ಟು ಅನ್ಯಾಯ ಎಂದರೆ, ಕೇವಲ ನಾಲ್ಕು ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ 20,000 ರೂ. ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಷ್ಟ ಎಷ್ಟೇ ಬಂದರೂ ಕೊನೇ ಉಸಿರಿರುವವರೆಗೆ ಹೋರಾಡುವುದು ನನ್ನ ಜಾಯಮಾನ: ಹೆಚ್​ಡಿ ದೇವೇಗೌಡ

ಈ ಹಿನ್ನೆಲೆಯಲ್ಲಿ ಎಲ್ಲರೂ ರಾಜಕೀಯ ಬದಿಗಿಟ್ಟು ಮೇಕೆದಾಟು ಯೋಜನೆಗೆ ಬೆಂಬಲ ನೀಡಬೇಕಿದೆ. ಈ ಯೋಜನೆ ಕಾರ್ಯಗತವಾದರೆ ಬೆಂಗಳೂರು ನೀರಿನ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ಅವರು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ