AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯವರಿಂದ ಅನುಮೋದನೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ. ನಿಖಿಲ್ ಅವರನ್ನು ರಾಜ್ಯ ನಾಯಕರನ್ನಾಗಿ ರೂಪಿಸುವುದಾಗಿ ಹೇಳಿದ್ದಾರೆ.

ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ
ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Nov 07, 2024 | 9:08 PM

Share

ರಾಮನಗರ, ನವೆಂಬರ್​ 07: ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ (HD Deve Gowda) ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ವೇಳೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದಿದ್ದಾರೆ.

ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ. ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ನಾನು ಅವರಿಗೆ ಮನವಿ ಮಾಡುತ್ತೇನೆ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ ಎಂದರು.

ಕಾಂಗ್ರೆಸ್ ವಿರುದ್ಧ ಹೆಚ್​ಡಿ ದೇವೇಗೌಡ ಟೀಕಾಸ್ತ್ರ

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ. ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದ್ರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶ್ಯಾನುಭೋಗನಹಳ್ಳಿ: ಎತ್ತಿಗಾಡಿಯಲ್ಲಿ ತೆನೆಹೊತ್ತ ಮಹಿಳೆಯೊಂದಿಗೆ ಕುಮಾರಸ್ವಾಮಿ ಪ್ರಚಾರ

55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ‌ ನೀವು ಕೇಳಿ ಎಂದಿದ್ದಾರೆ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ, ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದು ಹೇಳಿದ್ದಾರೆ.

ನಿಖಿಲ್ ಬಗ್ಗೆ ಮಾತನಾಡಿದ ಹೆಚ್​ಡಿ ದೇವೇಗೌಡ, ನಿಖಿಲ್​ ನನ್ನ ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್