Deve Gowda With Amit Shah: ರಾಜಕೀಯ ಮಾಡಲು ಬಂದಿಲ್ಲ; ಗೆಜ್ಜಲಗೆರೆ ಮೆಗಾ ಡೇರಿ ಉದ್ಘಾಟನೆಯಲ್ಲಿ ಅಮಿತ್ ಶಾ ಜತೆ ದೇವೇಗೌಡ ಭಾಗಿ

ದೇಶದ ಗೃಹ ಮಂತ್ರಿಗಳು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಅಮಿತ್ ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು ಎಂದು ದೇವೇಗೌಡ ಬಣ್ಣಿಸಿದ್ದಾರೆ.

Deve Gowda With Amit Shah: ರಾಜಕೀಯ ಮಾಡಲು ಬಂದಿಲ್ಲ; ಗೆಜ್ಜಲಗೆರೆ ಮೆಗಾ ಡೇರಿ ಉದ್ಘಾಟನೆಯಲ್ಲಿ ಅಮಿತ್ ಶಾ ಜತೆ ದೇವೇಗೌಡ ಭಾಗಿ
ಎಚ್​.ಡಿ. ದೇವೇಗೌಡ
Follow us
TV9 Web
| Updated By: Ganapathi Sharma

Updated on:Dec 30, 2022 | 12:50 PM

ಮಂಡ್ಯ: ‘ನಾನಿಲ್ಲಿಗೆ ರಾಜಕೀಯ ಮಾಡಲು ಬಂದಿಲ್ಲ. ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಜತೆ ಭಾಗವಹಿಸಿರುವ ಕಾರ್ಯಕ್ರಮ ರಾಜಕೀಯದ್ದಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್​.ಡಿ. ದೇವೇಗೌಡ (HD Deve Gowda) ಹೇಳಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು, ಸಚಿವರು ಭಾಗವಹಿಸಿದರು. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬಂದಿದ್ದಾರೆ. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ವಿವಿಧ ಸಚಿವರು, ಸ್ವಾಮಿಗಳು, ಕೇಂದ್ರ ಸಚಿವರು ಸೇರಿದಂತೆ ಅನೇಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಾನೂ ಭಾಗವಹಿಸಿದ್ದೇನೆ ಎಂದು ದೇವೇಗೌಡ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ನಿಧನರಾಗಿರುವುದಕ್ಕೆ ಮಾಜಿ ಪ್ರಧಾನಿ ಸಂತಾಪ ಸೂಚಿಸಿದರು.

ಅಮಿತ್ ಶಾ ವ್ಯಕ್ತಿತ್ವ ಬಹಳ ದೊಡ್ಡದು; ದೇವೇಗೌಡ

ದೇಶದ ಗೃಹ ಮಂತ್ರಿಗಳು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮತ್ತು ನಷ್ಟದ ಕಾರಣಗಳನ್ನು ತಿಳಿದುಕೊಳ್ಳುವ ಸಲುವಾಗಿ ನಮ್ಮ ಜೊತೆ ಇದ್ದಾರೆ. ಇದರಲ್ಲಿ ರಾಜಕೀಯ ಬೇಡ. ಅಮಿತ್ ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು ಎಂದು ದೇವೇಗೌಡ ಬಣ್ಣಿಸಿದರು. ನಾನು ಪ್ರಧಾನಿಯಾಗಿದ್ದಾಗ ರಾಜ್ಯದಲ್ಲಿ 12 ಸೊಸೈಟಿಗಳು ಇದ್ದವು. ಇವುಗಳನ್ನು ಎಚ್​​.ಡಿ. ರೇವಣ್ಣ ಒಂದುಗೂಡಿಸಿದರು. ಗುಜರಾತ್​​ನಲ್ಲಿ ಕುರಿಯನ್ ಅವರು ಕ್ಷೀರ ಕ್ರಾಂತಿ ಮಾಡಿರುವಂತೆ ನಮ್ಮ ರಾಜ್ಯದಲ್ಲಿಯೂ ಏನಾದರೂ ಮಾಡಬೇಕು ಎಂದು ಅವರು ನನ್ನ ಬಳಿ ಹೇಳಿದರು. ಈ ವಿಚಾರವಾಗಿ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದೆ. ಅವರು ನನ್ನ ಮನವಿಯನ್ನು ಪುರಸ್ಕರಿಸಿದರು. ಅದನ್ನು ಸಾಕಾರಗೊಳಿಸಿದರು. ಈ ವಿಚಾರವಾಗಿ ಕೇಂದ್ರ ಗೃಹ ಸಚಿವರಿಗೆ ನಾನು ಆಭಾರಿ. ಅವರ ಬಗ್ಗೆ ನನಗೆ ಬಹಳ ಗೌರವವಿದೆ ಎಂದು ದೇವೇಗೌಡ ಹೇಳಿದರು.

ಇದನ್ನೂ ಓದಿ: Amit Shah Speech ಮಂಡ್ಯದ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿ ಉದ್ಘಾಟಿಸಿ ಅಮಿತ್​​ ಶಾ ಮಾತು

ರೈತರಿಗೆ ಅನ್ಯಾಯವಾಗಲು ಬಿಡಲ್ಲ; ಅಮಿತ್ ಶಾ

ಸ್ವಾತಂತ್ರ್ಯ ಭಾರತದಲ್ಲಿ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಬೇಕೆಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಈ ಬೇಡಿಕೆ ಅಂದೇ ಈಡೇರಿದರೆ ಪರಿಸ್ಥಿತಿಯೇ ಬೇರೆ ಇರುತ್ತಿತ್ತು. ಭಾರತದ ರೈತರ ಇಂದಿನ ಸ್ಥಿತಿ ಬೇರೆಯೇ ಇರುತ್ತಿತ್ತು. ಸಹಕಾರ ಕ್ಷೇತ್ರದ ಸದಸ್ಯರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಒಟ್ಟು 260 ಕೋಟಿ ರೂ. ವೆಚ್ಚದಲ್ಲಿ ಇಲ್ಲಿ ಡೇರಿ ನಿರ್ಮಾಣವಾಗಿದೆ. ನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಲಿದೆ. ಮುಂದಿನ ದಿನಗಳಲ್ಲಿ 14 ಲಕ್ಷ ಲೀಟರ್​ ಮಾಡುವ ಗುರಿ ಹೊಂದಲಾಗಿದೆ ಎಂದು ಅಮಿತ್ ಶಾ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Fri, 30 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್