ರಾಮ ಮಂದಿರ ಉದ್ಘಾಟನೆ: ಆರೋಗ್ಯ ಲೆಕ್ಕಿಸದೇ ಕುಟುಂಬದ ಜತೆ ಅಯೋಧ್ಯೆಗೆ ತೆರಳಿದ ದೇವೇಗೌಡ

| Updated By: ರಮೇಶ್ ಬಿ. ಜವಳಗೇರಾ

Updated on: Jan 21, 2024 | 5:31 PM

ಹಿಂದೂಗಳ ಬಹು ವರ್ಷಗಳ ಕನಸು ನನಸಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಹಲವು ಗಣ್ಯ ವ್ಯಕ್ತಿಗಳು ಅಯೋಧ್ಯೆಯತನ್ನ ಹೆಜ್ಜೆ ಹಾಕಿದ್ದಾರೆ. ಅದರಂತೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಕುಟುಂಬ ಸಹ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಯೋಧ್ಯೆತೆ ತೆರಳಿದೆ.

ರಾಮ ಮಂದಿರ ಉದ್ಘಾಟನೆ: ಆರೋಗ್ಯ ಲೆಕ್ಕಿಸದೇ ಕುಟುಂಬದ ಜತೆ ಅಯೋಧ್ಯೆಗೆ ತೆರಳಿದ ದೇವೇಗೌಡ
ದೇವೇಗೌಡ ಕುಟುಂಬ
Follow us on

ಬೆಂಗಳೂರು, (ಜನವರಿ 21): ಅಯೋಧ್ಯೆಯಲ್ಲಿ ನಾಳೆ (ಜನವರಿ 22) ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ (HD Devegowda) ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಅವರು ಅಯೋಧ್ಯೆಗೆ ಹೋಗಬೇಕೋ ಬೇಡ್ವಾ ಎನ್ನುವ ಯೋಚನೆಯಲ್ಲಿದ್ದರು. ಆದರೂ ಸಹ ಅಯೋಧ್ಯೆಗೆ ಹೋಗಲು ಪ್ರಯತ್ನಿಸುತ್ತೇನೆ ಎಂದಿದ್ದರು. ಅದರಂತೆ ಇಂದು ತಮ್ಮ ಆರೋಗ್ಯವನ್ನು ಲೆಕ್ಕಿಸಿದೇ ಅಯೋಧ್ಯೆಗೆ ಹೊರಟ್ಟಿದ್ದಾರೆ. ಇನ್ನು ದೇವೇಗೌಡ್ರಿಗೆ ಪತ್ನಿ, ಪುತ್ರ ಹಾಗೂ ಮೊಮ್ಮಗ ಸಾಥ್ ನೀಡಿದ್ದಾರೆ.

ಇಂದು (ಜನವರಿ 21) ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪ್ರೈವೆಟ್​ ಜೆಟ್​ನಲ್ಲಿ ದೇವೇಗೌಡ ಜೊತೆ ಪತ್ನಿ ಚನ್ನಮ್ಮ, ಪುತ್ರ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಜೊತೆ ತೆರಳಿದರು. ಪ್ರೈವೆಟ್​ ಜೆಟ್​ನಲ್ಲಿ ಕುಟುಂಬ ಸಮೇತರಾಗಿ ಹೋಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

ಆಯೋಧ್ಯೆಗೆ ಹೊರಡುವ ಮುನ್ನ ಎಚ್​​ಡಿಡಿ ಹೇಳಿದ್ದಿಷ್ಟು

ಅಯೋಧ್ಯೆಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ನಾನು ನನ್ನ ಪತ್ನಿ, ಕುಮಾರಸ್ವಾಮಿ, ನಿಖಿಲ್ ಅಯೋಧ್ಯೆಗೆ ಹೋಗುತ್ತಿದ್ದೇವೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮ ಮಾಡ್ತಿರೋದು ಅವರ ಪೂರ್ವ ಜನ್ಮದ ಪುಣ್ಯವಾಗಿದೆ. ಅವರಿಗೆ ಈ ಕೆಲಸ ಮಾಡೋ ಶಕ್ತಿಯೂ ಕೂಡ ಪೂರ್ವ ಜನ್ಮದ ಪುಣ್ಯದಿಂದಲೇ ಸಿಕ್ಕಿದೆ. ಮಾಜಿ ಪ್ರಧಾನಿ ವಾಜಪೇಯಿ ಕೂಡ 6 ವರ್ಷ ಪ್ರಧಾನಿ ಆಗಿದ್ದರು. ಆದರೆ, ರಾಮ ಮಂದಿರದ ಮೊದಲ ಕಲ್ಲು ಸ್ವೀಕಾರ ಮಾಡೋಕು ಅವತ್ತು ವಾಜಪೇಯಿ ಅವರಿಗೆ ಕಷ್ಟ ಆಯ್ತು. ಇದು ಮೋದಿ ಅವರ ಪೂರ್ವ ಜನ್ಮ ಪುಣ್ಯವಾಗಿದೆ ಎಂದರು.

ಮೋದಿ ಅವರು ಶಿವ, ವಿಷ್ಣು ಪ್ರಾರ್ಥನೆ ಮಾಡಿದ್ದಾರೆ. ಅವರಿಗೆ ಶಿವ, ವಿಷ್ಣು ವ್ಯತ್ಯಾಸ ಇಲ್ಲ. ಹಿಂದಿನ ಜನ್ಮದಲ್ಲಿ ದೊಡ್ಡ ದೈವ ಭಕ್ತರಾಗಿ ಜನ್ಮ ತಾಳಿದ್ದರು ಅನ್ನಿಸುತ್ತದೆ. ಈ ಸಂಧರ್ಭದಲ್ಲಿ ಅ ಯೋಗ ಮೋದಿ ಅವರಿಗೆ ಬಂದಿದೆ. 11 ದಿನ ವೃತ ಮಾಡಿದ್ದಾರೆ. ಪುಣ್ಯ ಕ್ಷೇತ್ರಗಳ ಸ್ನಾನ ಮಾಡ್ತಿದ್ದಾರೆ. ಇದು ತುಂಬಾ ವಿಶೇಷವಾಗಿದೆ. ನಾನು ದೈವಭಕ್ತ. ಒಂದು ದಿನ ವ್ರತ ಮಾಡಬಹುದು. ಆದರೆ, ಹೀಗೆ ಮಾಡಲು ಆಗೊಲ್ಲ. ತಮ್ಮ ನಿತ್ಯದ ಕೆಲಸ ಕಾರ್ಯಕ್ರಮಗಳ ಜೊತೆ ವೃತ ಮಾಡ್ತಾರೆ. ಇದೊಂದು ದೊಡ್ಡ ವಿಶೇಷವಾಗಿದೆ. ಮೋದಿ ಅವರಿಗೆ ಇದು ಪೂರ್ವ ಜನ್ಮದ ಪುಣ್ಯ. ವಿಶ್ವದಲ್ಲಿ ಇದೊಂದು ದಾಖಲೆ ಎಂದರು.

ಈ ವೇಳೆ ನಾನು ರಾಜಕೀಯವಾಗಿ ಮಾತಾಡೊಲ್ಲ. ನಾನು ಓಟ್ ಪ್ರಚಾರ ಮಾಡೋಕೆ ಬಂದಿಲ್ಲ. ಪವಿತ್ರ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗವಹಿಸಬೇಕು. ನಮ್ಮಲ್ಲಿ ಶೃಂಗೇರಿ, ಪೇಜಾವರ ಮಠ ಸೇರಿ ನೂರಾರು ಮಠಗಳು ಇವೆ. ಆಧ್ಯಾತ್ಮಿಕ ಜಗತ್ತಿನಲ್ಲಿ ಎಲ್ಲಾ ದೇವರು ನಂಬಿದ್ದೇವೆ. ಜನರು ವ್ಯತ್ಯಾಸ ತೋರಿಸೋದಿಲ್ಲ. ಆಧ್ಯಾತ್ಮಿಕವಾಗಿ ಇದನ್ನ ನಂಬಿದ್ದಾರೆ. ನಡೆದುಕೊಂಡು ಬಂದಿದ್ದಾರೆ. ರಾಜ್ಯದ ಜನರಿಗೆ ನಾನು ತಲೆ ಬಾಗಿ ನಮಸ್ಕಾರ ಮಾಡುತ್ತೇನೆ ಎಂದು ಹೇಳಿದರು.