ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆರೋಗ್ಯ ಈಗ ಹೇಗಿದೆ? ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಇಲ್ಲಿದೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊನ್ನೆ ರಾತ್ರಿ ತಡರಾತ್ರಿ (ಅಕ್ಟೋಬರ್ 06)ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ದೊಡ್ಡಗೌಡರ ಆರೋಗ್ಯದ ಬಗ್ಗೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಬೆಂಗಳೂರು, (ಅಕ್ಟೋಬರ್ 08): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ (Health) ಏರುಪೇರಾಗಿದ್ದು,ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Bengaluru Manipal Hospital) ದಾಖಲಾಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿರುವ ದೇವೇಗೌಡರಿಗೆ ಅಕ್ಟೋಬರ್ 06ರ ತಡರಾತ್ರಿಯಿಂದ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ಬಗ್ಗೆ ಖುದ್ದು ಮಣಿಪಾಲ್ ಆಸ್ಪತ್ರೆ ಇಂದು (ಅಕ್ಟೋಬರ್ 08) ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ದೇವೇಗೌಡರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ.
ದೇವೇಗೌಡರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಚಿಕಿತ್ಸೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ. ಇದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಇನ್ನು ದೇವೇಗೌಡರ ಆರೋಗ್ಯದ ಮೇಲೆ ವೈದ್ಯಕೀಯ ತಜ್ಞರ ತಂಡ ನಿಗಾವಹಿಸಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಸೋಮವಾರ ರಾತ್ರಿ ಚಳಿ ಜ್ವರ ಹಾಗೂ ಸೋಂಕು ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ಸುದರ್ಶನ್ ಬಲ್ಲಾಳ್ ಅವರ ನೇತೃತ್ವದಲ್ಲಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಮುಂದುವರೆದಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಇನ್ನು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು ಇಂದು ಸಂಜೆ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ನಿನ್ನೆ ಪುತ್ರ ಹೆಚ್ ರೇವಣ್ಣ ಸಹ ಆಸ್ಪತ್ರೆಗೆ ತೆರಳಿ ತಂದೆ ಆರೋಗ್ಯ ವಿಚಾರಿಸಿದ್ದರು.




