ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ.
ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Published On - 11:49 am, Tue, 31 December 19