ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

| Updated By: ಸಾಧು ಶ್ರೀನಾಥ್​

Updated on: Jul 12, 2021 | 12:29 PM

HD kumaraswamy: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ‌. ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
Follow us on

ಹುಬ್ಬಳ್ಳಿ: ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್​ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

KRS ಡ್ಯಾಂ ಬಿರುಕು ಬಿಟ್ಟಿದೆ ಎಂದು ಸುಮಲತಾ ಆರೋಪ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಲತಾ ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲಿಸಬೇಕಿತ್ತು. ಕೆಆರ್​ಎಸ್ ಡ್ಯಾಂನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. JDS ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ‌. ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷಗಳಾಗಿವೆ. ಅದರ ವರದಿ ಸಲ್ಲಿಕೆಯಾಗಿದ್ದು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಮಧ್ಯೆ ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವಿನ ಯುದ್ಧದಂತಾಗಿದೆ: ಕಂದಾಯ ಸಚಿವ ಆರ್ ಅಶೋಕ್ ಹೋಲಿಕೆ

(HD kumaraswamy angry against mp sumalatha ambareesh because she defeated his son nikhil says siddaramaiah)