AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್: ಜೆಡಿಎಸ್ ಕಾರ್ಯಕರ್ತ ಸಿಸಿಬಿ ವಶಕ್ಕೆ, ಕುಮಾರಸ್ವಾಮಿ ಕೆಂಡಾಮಂಡಲ

ರಾಜ್ಯ ರಾಜಕಾರಣದಲ್ಲೀಗ ಸ್ಟಿಂಗ್ ಆಪರೇಷನ್‌ ಸಂಚಲನ ಮೂಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ಕೇಳಿಬಂದಿರುವ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಸ್ಟಿಂಗ್ ಮಾಡಿಸಿದ್ದು ಯಾರು? ಯಾರನ್ನ ಟಾರ್ಗೆಟ್ ಮಾಡಲಾಗಿತ್ತು? ಇದರ ಹಿಂದಿನ ಉದ್ದೇಶವೇನು ಎನ್ನುವ ಚರ್ಚೆಗಳು ಜೋರಾಗಿದ್ದು, ಮೂರು ಪಕ್ಷಗಳ ನಾಯಕರ ನಡುವೆ, ಆರೋಪ-ಪ್ರತ್ಯಾರೋಪಗಳ ವಾಗ್ಯುದ್ಧ ತಾರಕಕ್ಕೇರಿದೆ. ಇದರ ನಡುವೆ ಸಿಸಿಬಿ ಓರ್ವ ಜೆಡಿಎಸ್ ಕಾರ್ಯಕರ್ತನನ್ನು ವಶಕ್ಕೆ ಪಡೆದುಕೊಂಡಿದೆ.

ಸ್ಟಿಂಗ್ ಆಪರೇಷನ್: ಜೆಡಿಎಸ್ ಕಾರ್ಯಕರ್ತ ಸಿಸಿಬಿ ವಶಕ್ಕೆ, ಕುಮಾರಸ್ವಾಮಿ ಕೆಂಡಾಮಂಡಲ
HD Kumaraswamy
ರಮೇಶ್ ಬಿ. ಜವಳಗೇರಾ
|

Updated on: Oct 14, 2026 | 8:39 PM

Share

ಬೆಂಗಳೂರು, (ಅಕ್ಟೋಬರ್ 24): ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದು,ಈ ಸಂಬಂಧ ತನಿಖೆ ನಡೆಸಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ವೈರಲ್ ಮಾಡಲಾದ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ, ಶಂಕರ ಎನ್ನುವ ಜೆಡಿಎಸ್ ಕಾರ್ಯಕರ್ತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ತಮ್ಮ ಪಕ್ಷದ ಕಾರ್ಯಕರ್ತನನ್ನು ವಶಕ್ಕೆ ಪಡೆದುಕೊಂಡಿದ್ದಕ್ಕೆ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ?

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ,  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ.ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, “ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ” ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ. ಸಾಕು ಮಾಡಿ ನಿಮ್ಮ ಕಪಟ ನಾಟಕ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಫ್‌ಐಆರ್‌ ದಾಖಲಿಸದಿದ್ದರೆ ಸ್ಟಿಂಗ್‌ ಆಪರೇಶನ್‌ ಮಾಡಿಸಿದ್ದು ಕಾಂಗ್ರೆಸ್ಸೇ ಎಂದು ಖಚಿತ: ಅಶೋಕ್

ಅಮಾಯಕರ ಮೇಲೇನು ನಿಮ್ಮ ಪ್ರತಾಪ

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ. ಎಲ್ಲವನ್ನೂ ರೆಕಾರ್ಡ್ ಮಾಡಿದ ‘ಮಾಧ್ಯಮದ ಮುಸುಕು’ ಹಾಕಿಕೊಂಡಿರುವ ಆ ‘ಸಂಚುಕೋರ’ ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ. ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?