ಬೆಂಗಳೂರು, (ಅಕ್ಟೋಬರ್ 02): ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮುನಿಸಿಕೊಂಡಿದ್ದು, ಇದೀಗ ಅವರಿಗೆ ಡಿಕೆ ಬ್ರದರ್ಸ್ ಗಾಳ ಹಾಕಿದ್ದಾರೆ. ಹೌದು… ರಾಮನಗರ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಇಂದು (ಅಕ್ಟೋಬರ್ 02) ಕಾಂಗ್ರೆಸ್ಗೆ ಸೇರ್ಪಡೆಯಾದರು. ಬೆಂಗಳೂರಿನ KPCC ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕುಮಾರಸ್ವಾಮಿಯವರ ಆಪ್ತ ಮಾಜಿ ಶಾಸಕ ಎಂ.ಸಿ.ಅಶ್ವಥ್ ಸೇರಿ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದರು. ಈ ಮೂಲಕ ಡಿಕೆ ಬ್ರದರ್ಸ್, ಕುಮಾರಸ್ವಾಮಿಗೆ ಶಾಕ್ ಕೊಟ್ಟರು.