ಸಂಕಷ್ಟ ಕಾಲದಲ್ಲಿ ಅಧಿಕಾರ ಲಾಲಸೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

ಕೊವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಕಷ್ಟ ಕಾಲದಲ್ಲಿ ಅಧಿಕಾರ ಲಾಲಸೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ
ಎಚ್​ ಡಿ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 3:56 PM

ಬೆಂಗಳೂರು: ಕೊವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಬಿಕ್ಕಟ್ಟು ಎದುರಾಗಿದೆ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಡೀ ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಕೊವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ’ ಮುಂತಾದವರನ್ನು ಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ ಎಂದು ಅವರು ವಿಶ್ಲೇಷಿಸಿದ್ದಾರೆ.

ಇನ್ನೊಂದೆಡೆ, ‘ಅನ್ನ ಹಳಸಿದೆ, ___ ಕಾದಿದೆ’ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೊವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆ ಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು. ಆರೋಗ್ಯ ತುರ್ತು ಪರಿಸ್ಥಿತಿಯ ನಡುವೆ ಕನ್ನಡ, ಕರ್ನಾಟಕದ ಅಸ್ಮಿತೆ ಪ್ರಶ್ನೆ ಮಾಡುವಂಥ ಘಟನೆಗಳು ಒಂದರ ಹಿಂದೊಂದರಂತೆ ನಡೆದವು. ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್‌ ಏನು ಮಾಡಿದವು? ಇವರೆಲ್ಲ ರಾಜಕೀಯ ಮಾಡುತ್ತಿರುವುದು ಕರ್ನಾಟಕದಲ್ಲೇ ಅಲ್ಲವೇ? ಆದರೆ, ಕರ್ನಾಟಕದ ಸ್ವಾಭಿಮಾನಕ್ಕೆ ದಕ್ಕೆಯಾದಾಗ ಇವರೆಲ್ಲ ಅದ್ಯಾವ ಬಿಲದಲ್ಲಿ ಅಡಗಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.

(HD Kumaraswamy Criticizes BJP Congress Party Over Covid Situation Handling and Political Developments)

ಇದನ್ನೂ ಓದಿ: Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ಇದನ್ನೂ ಓದಿ: ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ

Published On - 3:49 pm, Wed, 9 June 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ