ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಕೆಶಿ ಬಣ ಮೇಲುಗೈ, ಎಚ್ಡಿಕೆಗೆ ಮುಖಭಂಗ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ. ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರು, ಡಿಸೆಂಬರ್ 15: ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್‌ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪ ಚುನಾವಣೆ ಬಳಿಕ ನಡೆದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ ಸೋಲಾಗಿದೆ. ಕೆಂಚಪ್ಪ ಗೌಡ 21 ಮತಗಳನ್ನು ಪಡೆದುಕೊಂಡಿದ್ದು, ಡಾ.ಆಂಜಿನಪ್ಪ 14 ಮತಗಳನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ಹೆಚ್‌ಡಿ ದೇವೇಗೌಡ ಮಹತ್ವದ ಸುಳಿವು
ಉಪಾಧ್ಯಕ್ಷರಾಗಿ ಎಲ್ ಶ್ರೀನಿವಾಸ್ ಮತ್ತು ಡಾ. ರೇಣುಕಾಪ್ರಸಾದ್ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್ ಮತ್ತು ಖಜಾಂಚಿಯಾಗಿ ಎನ್.ಬಾಲಕೃಷ್ಣ ಆಯ್ಕೆ ಆಗಿದ್ದಾರೆ. ಈ ಹಿಂದೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಸಿಎನ್ ಬಾಲಕೃಷ್ಣ ಅವಿರೋಧವಾಗಿ ಪುನರಾಯ್ಕೆ ಆಗಿದ್ದರು.
ಇನ್ನು ಇತ್ತೀಚೆಗೆ ನಡೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಜಿದ್ದಾಜಿದ್ದಿನ ಅದೇ ಅಖಾಡದಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಒಂದು ತಿಂಗಳಿನಿಂದಲೂ ರಣತಂತ್ರ ಹೆಣೆದಿದ್ದ ಡಿಕೆ ಸಹೋದರರು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟಿದ್ದರು.
ಇದನ್ನೂ ಓದಿ: ದೇವಸ್ಥಾನದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ಹೆಚ್ ಡಿ ದೇವೇಗೌಡ
ಜೆಡಿಎಸ್ ಭದ್ರಕೋಟೆ ಅಂತಾ ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮುಖಭಂಗ ಅನುಭವಿಸಿದ್ದರು. ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.