ಕುಮಾರಸ್ವಾಮಿ ದಂಪತಿ ಬಳಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ಇನ್ನು ಆಸ್ತಿ ಎಷ್ಟಿದೆ ಗೊತ್ತಾ?

HD Kumaraswamy Total Asset details: ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ರಾಷ್ಟ್ರರಾಜಕಾರಣದತ್ತ ಮುಖ ಮಾಡಿದ್ದಾರೆ. ಅದರಂತೆ ಇಂದು(ಏಪ್ರಿಲ್ 04) ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಕುಮಾರಸ್ವಾಮಿ ಕೋಟ್ಯಾಧಿಪತಿಯಾಗಿದ್ದಾರೆ. ಹಾಗಾದ್ರೆ ಎಚ್​ಡಿಕೆ ಆಸ್ತಿ ಎಷ್ಟಿದೆ? ಇಲ್ಲಿದೆ ವಿವರ

ಕುಮಾರಸ್ವಾಮಿ ದಂಪತಿ ಬಳಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ಇನ್ನು ಆಸ್ತಿ ಎಷ್ಟಿದೆ ಗೊತ್ತಾ?
ಎಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 04, 2024 | 6:29 PM

ಮಂಡ್ಯ, (ಏಪ್ರಿಲ್ 04): ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಇಂದು (ಏಪ್ರಿಲ್ 04) ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Loksbha constituency) ನಾಮಪತ್ರ ಸಲ್ಲಿಸಿದರು. ಎಚ್​ಡಿಕೆ ಉಮೇದುವಾರಿಕೆಯ ಅಫಿಡೆವಿಟ್​​ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಕುಮಾರಸ್ವಾಮಿ ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಹೌದು…ಕುಟುಂಬದ ಒಟ್ಟು ಚರಾಸ್ತಿ– 102.23 ಕೋಟಿ ರೂ. ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ-114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದ್ರೆ ಕಳೆದ ವರ್ಷಕ್ಕಿಂತ ಎಚ್​ಡಿಕೆ ಆಸ್ತಿ ಮೌಲ್ಯ 50.07 ಕೋಟಿ ರೂ. ಹೆಚ್ಚಳವಾಗಿದೆ.

ಎಚ್​ಡಿಕೆ ದಂಪತಿ ಬಳಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ-ಬೆಳ್ಳಿ, ವಜ್ರ

ಕುಮಾರಸ್ವಾಮಿ ದಂಪತಿ  ಕೋಟ್ಯಾಂತರ ರೂ ಮೌಲ್ಯದ ಆಸ್ತಿಯೊಂದಿಗೆ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹೊಂದಿರುವುದು ವಿಶೇಷ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. ಮೊದಲಿಗೆ ಕುಮಾರಸ್ವಾಮಿಯವರದ್ದು ನೋಡುವುದಾದರೆ,   47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅನಿತಾ ಬಳಿ ಇದೆ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ

ಇನ್ನು ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಹೊಂದಿದ್ದಾರೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.

ಕೋಟ್ಯಾಂತರ ರೂ. ಸಾಲ ಮಾಡಿಕೊಂಡಿರುವ ದಂಪತಿ

ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಬಳಿಕ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನಾಭರಣಗಳು ಇವೆ. ಅದರ ಜೊತೆ ಈ ದಂಪತಿ ಕೋಟ್ಯಾಂತರ ರೂಪಾಯಿ ಸಾಲವನ್ನು ಮಾಡಿಕೊಂಡಿದೆ. ಅನಿತಾ ಕುಮಾರಸ್ವಾಮಿ 63.05 ಕೋಟಿ ರೂಪಾಯಿ ಸಾಲ ಮಾಡಿಕೊಂಡಿದ್ದರೆ,  ಕುಮಾರಸ್ವಾಮಿ ಅವರು ಬರೋಬ್ಬರಿ 19.12 ಕೋಟಿ ರೂಪಾಯಿ ಸಾಲ ಇದೆ ಎಂದು ಮಾಹಿತಿ ನೀಡಿದ್ದಾರೆ.

ಎಚ್​ಡಿಕೆ ದಂಪತಿ ಚರಾಸ್ತಿ-ಸ್ಥಿರಾಸ್ತಿ ಎಷ್ಟಿದೆ ಗೊತ್ತಾ?

ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.

ಎಚ್​ಡಿಕೆ ಮೇಲೆ ಎಷ್ಟು ಕೇಸ್​ಗಳಿವೆ ಗೊತ್ತಾ?

ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

Published On - 6:19 pm, Thu, 4 April 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ