AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆ

ಕಾಂಗ್ರೆಸ್​​​​​ನ ಶಾಸಕರಾಗಿದ್ದ ಡಿ. ಸುಧಾಕರ್ ಅವರ ನಿಧನದಿಂದಾಗಿ ಹಿರಿಯೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಆದ್ರೆ, ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮುಖ್ಯವಾಗಿ ಹಿರಿಯೂರು ಟಿಕೆಟ್‌ಗಾಗಿ ದೋಸ್ತಿಗಳಾದ ಬಿಜೆಪಿ ಮತ್ತು ಜೆಡಿಎಸ್ (NDA ಮೈತ್ರಿಕೂಟ) ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಗೊಂದಲದ ನಡುವೆ ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆಗಳನ್ನು ನೀಡಿದ್ದಾರೆ.

ಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆ
ಅಶೋಕ್, ಕುಮಾರಸ್ವಾಮಿ, ವಿಜಯೇಂದ್ರ
ರಮೇಶ್ ಬಿ. ಜವಳಗೇರಾ
|

Updated on: Nov 15, 2026 | 4:09 PM

Share

ಬೆಂಗಳೂರು, ನವೆಂಬರ್ 15: ಹಿರಿಯೂರು ಉಪ ಚುನಾವಣೆಯ ಘೋಷಣೆಗೂ ಮುನ್ನವೇ ರಾಜಕೀಯ ಬೆಳವಣಿಗೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿದ್ರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ನಿರ್ಮಾಣವಾಗಿದೆ. ಒಂದೆಡೆ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ಲೆಕ್ಕಾಚಾರ ಹಾಕುತ್ತಿದ್ದರೆ, ಇನ್ನೊಂದೆಡೆ ಮಿತ್ರ ಪಕ್ಷ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ. ಹೀಗಾಗಿ ಹಿರಿಯೂರು ಉಪಸಮರಕ್ಕೂ ಮುನ್ನ ದೋಸ್ತಿ ಮಧ್ಯೆ ಪೈಪೋಟಿ ಶುರುವಾಗಿದ್ದು, ಮಿತ್ರ ಪಕ್ಷಗಳ ನಾಯಕರು ಬಹಿರಂಗವಾಗಿಯೇ ಟಿಕೆಟ್ ಬಗ್ಗೆ ಮಾತುಗಳನ್ನಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸ್ವತಃ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಕೆಲ ಖಡಕ್ ಸಲಹೆಗಳನ್ನು ನೀಡಿದ್ದಾರೆ.

ಅಶೋಕ್ ಮಾತಿಗೆ ಹೆಚ್​​ಡಿಕೆ ಬೇಸರ

ಹಿರಿಯೂರು ಟಿಕೆಟ್​​​ ಬಿಜೆಪಿಗೆ ನೀಡಬೇಕೆನ್ನುವ ವಿಪಕ್ಷ ನಾಯಕ ಆರ್ ಅಶೋಕ್ ಮಾತಿಗೆ ಬೇಸರ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಏನು ಪರಿಸ್ಥಿತಿ ಇದೆ ಎಂದು ಬಿಜೆಪಿ ನಾಯಕರು ಅರ್ಥೈಸಿಕೊಳ್ಳಬೇಕು. ಉಪಚುನಾವಣೆಯಲ್ಲಿ ಅಭ್ಯರ್ಥಿ ಹಾಕುವ ಬಗ್ಗೆ ನನಗೆ ಪ್ರತಿಷ್ಠೆ ಇಲ್ಲ. ಆ ಚುನಾವಣೆ ಗೆದ್ದರೇ ರಾಜ್ಯದಲ್ಲಿ ಮುಂದಿನ ಭವಿಷ್ಯ ಇದೆ. ಜನ ಏನು ನಿರೀಕ್ಷೆ ಮಾಡುತ್ತಿದ್ದಾರೆ ಅದನ್ನು ಪ್ರೋತ್ಸಾಹ ಮಾಡಬೇಕು. ಇಲ್ಲಿ ಬಿಜೆಪಿ-ಜೆಡಿಎಸ್​ನಿಂದ ನಿಲ್ಲಬೇಕು ಎಂಬುದು ಪ್ರಶ್ನೆ ಅಲ್ಲ. ಜನಾಭಿಪ್ರಾಯ ಸಂಗ್ರಹ ಮಾಡುವುದು ಎರಡು ಪಕ್ಷಗಳ ಜವಾಬ್ದಾರಿ. ನಾನು ಮಾತನಾಡಲು ತಯಾರಿದ್ದೇನೆ ಎಂದಿದ್ದಾರೆ.

ಇದನ್ನೂ ನೋಡಿ: ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಡುವೆಯೇ ಗೊಂದಲ

ಆರ್ ಅಶೋಕ್ ಹೇಳಿದ್ದೇನು?

ಹಿರಿಯೂರು ಟಿಕೆಟ್​​​ ನಮ್ಮ ಪಕ್ಷಕ್ಕೆ ನೀಡಬೇಕು. ಟಿಕೆಟ್ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಜೆಡಿಎಸ್​ ಜೊತೆ ಕೇಂದ್ರ ನಾಯಕರು ಕೂಡ ಚರ್ಚೆ ಮಾಡ್ತಾರೆ. ಜೆಡಿಎಸ್​ ಮನವೊಲಿಸಿ ನಮ್ಮ ಪಕ್ಷಕ್ಕೇ ಟಿಕೆಟ್ ಕೊಡುವ ವಿಶ್ವಾಸವಿದೆ. ಸದ್ಯ ನಾವು ಬಿಜೆಪಿಗೇ ಟಿಕೆಟ್ ನೀಡಬೇಕೆಂದು ನಿರ್ಧರಿಸಿದ್ದೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾಯಕರಲ್ಲಿ ಗೊಂದಲ

ಡಿ ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ದಗೊಳ್ಳುತ್ತಿದೆ. ಚುನಾವಣಾ ಘೋಷಣೆಗೂ ಮುನ್ನವೇ ಟಿಕೆಟ್ ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಚರ್ಚೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದರೆ, ಇನ್ನೊಂದೆಡೆ ಎನ್​​ಡಿಎ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾಯಕರಲ್ಲೇ ಗೊಂದಲವಾಗಿದೆ. ಈಗಾಗಲೇ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದ್ರೆ, ಜೆಡಿಎಸ್ ಸ್ಪರ್ಧೆ ಬಗ್ಗೆ ರಾಜ್ಯ ಬಿಜೆಪಿಗೆ ಸ್ಪಷ್ಟತೆ ಸಿಕ್ಕಿಲ್ಲ. ಹಿರಿಯೂರು ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಡಬೇಕಾ? ಅಥವಾ ಬಿಜೆಪಿಯೇ ಸ್ಪರ್ಧಿಸಬೇಕಾ ಎಂಬ ಚರ್ಚೆಗಳು ನಡೆದಿವೆ. ಹೀಗಾಗಿ ಎನ್​​ಡಿಎ ಅಭ್ಯರ್ಥಿ ಯಾರು ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಡಿಕೆ ಶಿವಕುಮಾರ್ ಅವರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಮತ್ತೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರಿಗೂ ಇದು ಮಹತ್ವದ ಉಪ ಚುನಾವಣೆಯಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಅನುಕಂಪದ ಮೇರೆಗೆ ಸುಧಾಕರ್ ಪುತ್ರ ಸುಹಾಸ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್