ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿ ಮತ್ತು ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಕೊವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದೆ ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿದರೆ ಏನು ಉಪಯೋಗ? ಎಂದು ಮಾಜಿ ಮುಖ್ಯಮಂತ್ರಿ ಕೆಚ್.ಡಿ.ಕುಮಾರಸ್ವಾಮಿ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.
ಈ ಮಧ್ಯೆ ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಮತ್ತು ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ ಮತ್ತು ರಾಜ್ಯ ಎರಡೂ ಸರ್ಕಾರಗಳು ಕೊವಿಡ್ ವಿಷಯದಲ್ಲಿ ಎಡವಿವೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಕೊವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಇದರ ಬದಲಿಗೆ ಸಭೆಗಳನ್ನು ನಡೆಸಿದರೆ ಪ್ರಯೋಜನವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ.
4/5— H D Kumaraswamy (@hd_kumaraswamy) April 14, 2021
ಇದನ್ನೂ ಓದಿ
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಣ್ಣೆನಗರಿಯಲ್ಲಿ ಮಾರ್ಷಲ್ಗಳ ನೇಮಕ; ಕೊರೊನಾ ನಿಯಮ ಪಾಲಿಸದವರಿಗೆ ಮಹಾನಗರ ಪಾಲಿಕೆಯಿಂದ ಹೊಸ ನಿಯಮ
(HD Kumaraswamy in tweets slams on Karnataka Govt. For its decision on Covid control)