AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪದ ವಿಚಾರದಲ್ಲಿ ಸರ್ಕಾರದ ನಡೆಯ ಬಗ್ಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಳಿಕ, ಕರ್ನಾಟಕ ಸರ್ಕಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಇದರೊಂದಿಗೆ, ಪ್ರಭಾವಿ ರಾಜಕಾರಣಿಯೊಬ್ಬರ ಹಾಗೂ ಕೇಂದ್ರ ಸಚಿವರ ವಿರುದ್ಧವೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದಂತಾಗಲಿದೆ.

Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Mar 18, 2025 | 11:09 AM

ರಾಮನಗರ, ಮಾರ್ಚ್ 18: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ (Land Encroachment) ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ (Karnataka High Court) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.

ಹೆಚ್​ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್​ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ
Image
ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣಕ್ಕೆ ವಿರೋಧ: ದಲಿತ ನಾಯಕರಿಂದ ಸಭೆ
Image
ಹಣ..ಕಾರು ಹೊಯ್ತು: ಪರಪ್ಪನ ಅಗ್ರಹಾರ ಪೊಲೀಸರ ನಿರ್ಲಕ್ಷ್ಯಕ್ಕೆ ಚಾಲಕ ಕಂಗಾಲು
Image
ಹೋರಾಟಕ್ಕೆ ಮಣಿದ ನಮ್ಮ ಮೆಟ್ರೋ: ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್
Image
ಬನ್ನೇರುಘಟ್ಟ ಉದ್ಯಾನವನ: 3 ತಿಂಗಳಲ್ಲಿ 20ಕ್ಕೂ ಅಧಿಕ ವನ್ಯಜೀವಿಗಳು ಸಾವು

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.

ಇದನ್ನೂ ಓದಿ: ಎಚ್​​ಡಿಕೆಗೆ ಪ್ರಾಸಿಕ್ಯೂಷನ್ ಸಂಕಷ್ಟ: ರಾಜ್ಯಪಾಲರ ನಿರ್ಧಾರದಲ್ಲಿ ಕುಮಾರಸ್ವಾಮಿ ಭವಿಷ್ಯ

ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್​ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ