ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ; ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್

|

Updated on: Mar 21, 2021 | 1:49 PM

ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಅವರ ಹೇಳಿಕೆಗೆ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ

ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ; ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (ಫೈಲ್ ಚಿತ್ರ)
Follow us on

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳವಾಗಿರುವುದರಿಂದ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು ಎಂಬ ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಅವರ ಹೇಳಿಕೆಗೆ, ರೈತರ ಕಷ್ಟ ನೀಗಿಸಬೇಕಾದವರ ಬೇಜವಾಬ್ದಾರಿಯುತ ಹೇಳಿಕೆ ಇದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಲು 1ರಿಂದ2 ಲಕ್ಷ ರೂಪಾಯಿ ವ್ಯಯಿಸಬೇಕು. ಪಿವಿಸಿ ಪೈಪ್‌ಗಳ ಬೆಲೆ ದುಪ್ಪಟ್ಟಾಗಿದೆ. ಮೋಟರ್ ಬೆಲೆಯೂ ಏರಿದೆ. ಕೃಷಿ ಪಂಪ್‌ಸೆಟ್‌ಗಾಗಿ ಶೇ.18ರಷ್ಟು ಜಿಎಸ್‌ಟಿ ಪಾವತಿಸ ಬೇಕು. ರೈತರೇ ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾಧಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂದು ಅವಲೋಕನೆಯಾಗಬೇಕಿದೆ ಎಂದು ಟ್ವೀಟ್​ನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಇನ್ನು, 2022ರ ವೇಳೆಗೆ ರೈತರ ಆದಾಯ ದ್ವಿಗುಣವಾಗುತ್ತೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ 2021ರ ವೇಳೆಗೆ ರೈತರ ಕೃಷಿ ಖರ್ಚು ದುಪ್ಪಟ್ಟಾಗಿದೆ. ದೇಶದಲ್ಲಿ ರಸಗೊಬ್ಬರಗಳ ಬೆಲೆಯೂ ಏರಿಕೆಯಾಗಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಹ ಸ್ಥಿತಿ ಉಂಟಾಗಿದೆ. ಇನ್ನು ರೈತರ ಆದಾಯ ದ್ವಿಗುಣಗೊಳ್ಳುವುದೆಲ್ಲಿ ಎಲ್ಲಿ? ಎಂದು ಟ್ವೀಟ್​ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೃಷಿಯಲ್ಲಿ ಈಗ ರೈತರು ಆದಾಯ ಗಳಿಸುವುದು ಇರಲಿ, ಕೃಷಿ ಮಾಡುವುದಕ್ಕೆ ರೈತರು ಕಷ್ಟ ಅನುಭವಿಸಬೇಕಾಗಿದೆ. ಇದು ಇವತ್ತಿನ ದುರಂತ. ರೈತರ ಈಗಿನ ಸಂಕಷ್ಟವನ್ನು ನಿವಾರಿಸುವುದಕ್ಕೆ ಆಗಿಲ್ಲ. ಇನ್ನು ರೈತರ ಆದಾಯ ಹೇಗೆ ದ್ವಿಗುಣಗೊಳಿಸುತ್ತಾರೆ? ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್​.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.


ಪ್ರಧಾನಿ ಮೋದಿ ಪಶ್ಚಿಮ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಯಾವ ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ?ಮೋದಿ ಉತ್ತರಿಸುವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ, ಮಮತಾ ಬಗ್ಗೆ ಪ್ರಧಾನಿ ಮೋದಿ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ ನುಂಗಿ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆ ಕೊನೆಗಾಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ: ಎಚ್​​.ಡಿ. ಕುಮಾರಸ್ವಾಮಿ ಸದನಕ್ಕೆ ಗೈರು?

ಹೆಚ್​.ಡಿ.ಕುಮಾರಸ್ವಾಮಿಯೇ ಸಿಡಿ ‘ಮಹಾನಾಯಕ’ ಇರಬಹುದು, ಎಸ್​ಐಟಿ ಪೊಲೀಸರು ಅವರ ತನಿಖೆ ಮಾಡಲಿ: ಕೆ.ಎನ್.ರಾಜಣ್ಣ

Published On - 1:44 pm, Sun, 21 March 21