ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ನಿಧನ

| Updated By: ಆಯೇಷಾ ಬಾನು

Updated on: Jul 06, 2021 | 7:33 AM

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ. ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ನಿಧನ
ಸದಾನಂದ ಕೆ.ಸಿ.
Follow us on

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಸದಾನಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ. ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. 2018 ಮೇ 25ರಿಂದ ಪೂರ್ವಾನ್ವಯ ಆಗುವಂತೆ ಕೆ.ಸಿ.ಸದಾನಂದ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ಹಿಂದೆ ಸದಾನಂದ ಅವರು ಮುಂಬೈನ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಎರಡು ವರ್ಷ, ಬೆಂಗಳೂರಿನ ಸಂಜೆವಾಣಿ ಪತ್ರಿಕೆಯಲ್ಲಿ 12 ವರ್ಷ, ಕನ್ನಡಪ್ರಭ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ 10 ವರ್ಷಗಳಿಂದ ಹೆಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.

ಇದನ್ನೂ ಓದಿ: DCM Laxman Savadi Son: ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು