ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ; ಬಸವಣ್ಣನ ವಚನದ ಮೂಲಕ ಬಿಜೆಪಿ ಟೀಕಿಸಿದ ಕುಮಾರಸ್ವಾಮಿ

ಸರಣಿ ಟ್ವೀಟ್​ಗಳನ್ನು ಮಾಡಿರುವ ಕುಮಾರಸ್ವಾಮಿ, ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ ಎಂದು ತೆಗಳಿದ್ದಾರೆ.

ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ; ಬಸವಣ್ಣನ ವಚನದ ಮೂಲಕ ಬಿಜೆಪಿ ಟೀಕಿಸಿದ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on:Jun 17, 2021 | 6:24 PM

ಬೆಂಗಳೂರು: ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ, ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ, ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ ಸಂಗಮದೇವ ಎಂದು ವಚನ ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ. ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಡುಕಾಟ ನಡೆಕನ ಹುದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ… ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್​ಗಳನ್ನು ಮಾಡಿರುವ ಕುಮಾರಸ್ವಾಮಿ, ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ ಎಂದು ಕುಟುಕಿದ್ದಾರೆ.

ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು ಎಂದು ತೆಗಳಿದ್ದಾರೆ.

ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು.

ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು ಎಂದು ಸರಣಿ ಟ್ವೀಟ್​ಗಳಲ್ಲಿ ಬಿಜೆಪಿ ನಡವಳಿಕೆಯನ್ನು ವಿರೋಧಿಸಿದ್ದಾರೆ.

ಈ ಪರಿಸ್ಥಿತಿಗೆ ಬಿಜೆಪಿಯಷ್ಟೆ ಅಲ್ಲ ಕಾಂಗ್ರೆಸ್​ ಸಹ ಕಾರಣ ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ನಾನು ಟ್ವೀಟ್ ಮಾಡಿದ್ದೆ. ಬಸವಣ್ಣನವರ ವಚನವನ್ನ ಉಲ್ಲೇಖಿಸಿ ಟ್ವೀಟ್ ಮಾಡಿದ್ದೆ. ಈ ಪರಿಸ್ಥಿತಿಗೆ ಬಿಜೆಪಿಯಷ್ಟೆ ಅಲ್ಲ ಕಾಂಗ್ರೆಸ್​ ಸಹ ಕಾರಣ ಎಂದು ಆ ಬಳಿಕ, ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆಯಲ್ಲಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಜನರು ಬಿಜೆಪಿಯವರಿಗೆ ಅಧಿಕಾರ ಕೊಟ್ಟಿರಲಿಲ್ಲ. ಬಿಜೆಪಿಯವರಿಗೆ ಅಧಿಕಾರ ಕೊಟ್ಟವರೇ ಕಾಂಗ್ರೆಸ್​ನವರು. ಆದ್ರೆ ಕಾಂಗ್ರೆಸ್ ಅಧ್ಯಕ್ಷರು ವೈರಾಗ್ಯದ ಬಗ್ಗೆ ಮಾತಾಡಿದ್ದಾರೆ. ಚುನಾವಣೆಯಲ್ಲಿ ಜನ ಬಿಜೆಪಿ ತಿರಸ್ಕರಿಸಿದ್ದಾಗ ಕಾಂಗ್ರೆಸ್​ ಪಕ್ಷದ ನಾಯಕರು ನಮ್ಮ ಬಳಿಗೆ ಬಂದರು. ನಂತರ ಮಹಾನ್ ನಾಯಕರೆಲ್ಲಾ ಸೇರಿ ನನ್ನ ಇಳಿಸಿದರು. ಮತ್ತೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ನನ್ನ ಇಳಿಸಿದರು.

ಯಡಿಯೂರಪ್ಪಗೆ ವಯಸ್ಸಾಗಿದೆ ಮತ್ತೆ ಅಧಿಕಾರ ಹಿಡಿಯಬಹುದು. 6 ತಿಂಗಳಲ್ಲಿ‌ ಮತ್ತೆ ಅಧಿಕಾರ ಹಿಡಿಯಬಹುದು ಅಂದ್ಕೊಂಡಿದ್ರು. ಆದ್ರೆ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕೊನೆವರೆಗೂ ಹೋರಾಟ ನಡೆದಿದೆ. ಅವರಿಗೆ ರಾಜ್ಯದ ಹಿತಕ್ಕಿಂತ ಅಧಿಕಾರವೇ ಮುಖ್ಯವಾಗಿದೆ. ಇಂದಿನ ಸ್ಥಿತಿಗೆ ಬಿಜೆಪಿ, ಕಾಂಗ್ರೆಸ್ ನಾಯಕರೂ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ದೇಶದ ಅಭಿವೃದ್ಧಿಗೆ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ. ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಹೇಗೆ ಸಹಿಸಿಕೊಂಡಿದೆ? ಎಂದೂ ಟ್ವಿಟರ್​ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿಯ ಶಾಸಕರೇ ಹೇಳುತ್ತಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಸರ್ಕಾರ ವಿಸರ್ಜಿಸಿ. ಸರ್ಕಾರ ವಿಸರ್ಜಿಸಿ ಅಧಿಕಾರದಿಂದ ದೂರ ಉಳಿಯಬಾರದೇಕೆ? ಎಂದು ಹೆಚ್​.ಡಿ.ಕುಮಾರಸ್ವಾಮಿ ಕೇಳಿದ್ದಾರೆ.

ಇದನ್ನೂ ಓದಿ: ಯಾರೋ ನನ್ನ ಮೊಬೈಲ್​ ಟ್ಯಾಪ್ ಮಾಡ್ತಿದ್ದಾರೆ, ಎಲ್ಲೇ ಹೋದರೂ ಕೆಲ ವ್ಯಕ್ತಿಗಳು ಹಿಂದೆ ಬರುತ್ತಾರೆ: ಅರವಿಂದ್ ಬೆಲ್ಲದ್ ಆರೋಪ

ಬಿ ಎಸ್ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್; ಯಾರೂ ಹಾದಿಬೀದಿಯಲ್ಲಿ ಮಾತಾಡಬಾರದು: ಸಿ ಟಿ ರವಿ

Published On - 6:10 pm, Thu, 17 June 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM