ನಾಗಮಂಗಲ ಗಲಭೆ ಪ್ರಕರಣ: ಬಂಧಿತ ಆರೋಪಿಗಳ ಕುಟುಂಬಕ್ಕೆ ಹೆಚ್​ಡಿಕೆ ಆರ್ಥಿಕ ಸಹಾಯ

ನಾಗಮಂಗಲದ ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಸದ್ಯಕ್ಕೆ ಕುಟುಂಬ ನಿರ್ವಹಣೆ ಖರ್ಚು ನಾನು ಭರಿಸುತ್ತೇನೆ. ವಾರಕ್ಕೆ ಬೇಕಾದ ಆಹಾರ ಪದಾರ್ಥ ವ್ಯವಸ್ಥೆ ಮಾಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನ ಬಿಡಿಸುತ್ತೇನೆ. ವಕೀಲರನ್ನ ನಾನೇ ನೇಮಿಸಿಕೊಡುತ್ತೇನೆ ಎಂದು ಬಂಧಿತರ ಕುಟುಂಬಗಳಿಗೆ ಮಾತು ಕೊಟ್ಟಿದ್ದಾರೆ.

ನಾಗಮಂಗಲ ಗಲಭೆ ಪ್ರಕರಣ: ಬಂಧಿತ ಆರೋಪಿಗಳ ಕುಟುಂಬಕ್ಕೆ ಹೆಚ್​ಡಿಕೆ ಆರ್ಥಿಕ ಸಹಾಯ
ನಾಗಮಂಗಲ ಗಲಭೆ ಪ್ರಕರಣ: ಬಂಧಿತ ಆರೋಪಿಗಳ ಕುಟುಂಬಕ್ಕೆ ಹೆಚ್​ಡಿಕೆ ಆರ್ಥಿಕ ಸಹಾಯ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Sep 19, 2024 | 8:39 PM

ಮಂಡ್ಯ, ಸೆಪ್ಟೆಂಬರ್​ 19: ಜಿಲ್ಲೆಯ ನಾಗಮಂಗಲದಲ್ಲಿ ಕೋಮು ಗಲಭೆ ಕೇಸ್​ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಗ್ರಾಮಸ್ಥರ ಅಳಲು ಆಲಿಸಿದ್ದಾರೆ. ಇದೇ ವೇಳೆ‌ ಜೈಲು ಸೇರಿರುವ ವ್ಯಕ್ತಿಗಳ ಕುಟುಂಬಕ್ಕೆ ಮತ್ತು ಪೊಲೀಸರಿಗೆ ಹೆದರಿ ಊರು ಬಿಟ್ಟಿರುವ ಕುಟುಂಬಗಳಿಗೂ ಆರ್ಥಿಕ ಸಹಾಯ ಮಾಡಿದ್ದಾರೆ.

ಬಂಧಿತರ ಕುಟುಂಬಗಳಿಗೆ ಹೆಚ್​ಡಿ ಕುಮಾರಸ್ವಾಮಿ ಆರ್ಥಿಕ ಸಹಾಯ 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಸದ್ಯಕ್ಕೆ ಕುಟುಂಬ ನಿರ್ವಹಣೆ ಖರ್ಚು ನಾನು ಭರಿಸುತ್ತೇನೆ. ವಾರಕ್ಕೆ ಬೇಕಾದ ಆಹಾರ ಪದಾರ್ಥ ವ್ಯವಸ್ಥೆ ಮಾಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನ ಬಿಡಿಸುತ್ತೇನೆ. ವಕೀಲರನ್ನ ನಾನೇ ನೇಮಿಸಿಕೊಡುತ್ತೇನೆ ಎಂದು ಬಂಧಿತರ ಕುಟುಂಬಗಳಿಗೆ ಮಾತು ಕೊಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಜೈಲಿನ ಮುಂದೆ ಈ ಗ್ರಾಮದ ಹೆಣ್ಣು ಮಕ್ಕಳು ಕಣ್ಣೀರು ಹಾಕಿದ್ದಾರೆ. ಇದನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಹೀಗಾಗಿ ಅವರಿಗೆ ಆರ್ಥಿಕ ಸಹಾಯ ಮಾಡಲು ಬಂದಿದ್ದೇನೆ. ಅಂದಿನ ಗಲಾಟೆಯಲ್ಲಿ ಯಾರ ವೈಫಲ್ಯತೆ ಎಂದು ನಾನು ಹೇಳಲ್ಲ. ಗೃಹ ಸಚಿವರು ಎಚ್ಚರಿಕೆ ವಹಿಸಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದಿದ್ದಾರೆ.

ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ‌ ಮುಖ್ಯ. ಮುಗ್ದ ಜನರನ್ನು ಪೊಲೀಸರು ಬಂದಿಸುವು ಬೇಡ. ಈಗ ಬಂಧಿಸಿರೋರು ಸಾಕು. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಈ ಘಟನೆಯನ್ನು ರಾಜಕೀಯವಾಗಿ ಯಾರು ದುರ್ಬಳಕೆ ಮಾಡಿಕೊಳ್ಳೋದು ಬೇಡ. ನಾನು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕೆ ನಾನು ಬಂದಿಲ್ಲ. ಜನರಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಬಂದಿದ್ದೇನೆ. ಇದರ ಬಗ್ಗೆ ಕೆಲವರು ಮಾತಾಡುತ್ತಾರೆ. ನಾನು 20, 30 ವರ್ಷಗಳಿಂದ ಈ‌ ಕೆಲಸ ಮಾಡುತ್ತಿದ್ದೇನೆ. ನೀವು ಬೇಕಿದ್ದರೆ ಸಹಾಯ ಮಾಡಿ. ದ್ವೇಷ ರಾಜಕೀಯ ಮಾಡುವುದು ಬೇಡ. ಜೈಲಿಗೆ ಹೋಗಿರುವವರನ್ನು ಕಾನೂನಿನ ವ್ಯಾಪ್ತಿಯಲ್ಲಿ ಜಾಮೀನು ಕೊಡಿಸುವುದಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ.

ಸಚಿವ ಚಲುವರಾಯಸ್ವಾಮಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಸಂಸದರ ಕೆಲಸ ಏನು? ಆರಾಮವಾಗಿ ಡೆಲ್ಲಿಯಲ್ಲಿ‌ರಬೇಕಾ? ಜನರು ಕಷ್ಟದಲ್ಲಿ ಇರುವಾಗ ಸಂಸದರು ಬರಲೇ ಬೇಕು. ನಾನು ಮಂಡ್ಯ ಸಂಸದ. ನಾನು ಬೆಂಕಿ ಹಚ್ಚಲು‌ ಬಂದಿಲ್ಲ, ರಾಜಕೀಯ ಮಾಡಲು ಬಂದಿಲ್ಲ. ಇದನ್ನ ನೀವು ಅರ್ಥ ಮಾಡಿಕೊಳ್ಳಬೇಕು. ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್​ಐಆರ್​ ಹಾಕಿದ್ದಾರೆ. ಗಲಭೆ ಮಾಡಲು ಪೋಸ್ಟ್ ಮಾಡಿದ್ದಾರೆಂದು ಹೇಳುತ್ತಾರೆ. ಇವರ ಎಫ್‌ಐಆರ್ ನೋಡಿದರೆ ನಗು ಬರುತ್ತೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ