ಬೆಂಗಳೂರು/ ಬಳ್ಳಾರಿ: ಜಿಂದಾಲ್‌ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಇತ್ತೀಚೆಗೆ ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದರು. ಅದಕ್ಕೆ ನಿನ್ನೆ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆಯಲ್ಲಿ ಸಮಾಧಾನಕರ ಉತ್ತರ ಸಿಕ್ಕಿದೆ ಎಂಬ ರೀತಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ. ನಿನ್ನೆ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಂದಾಲ್ ಕಂಪನಿಗೆ ಭೂಮಿ ನೀಡುವುದನ್ನು ಸದ್ಯಕ್ಕೆ ಕೈಬಿಟ್ಟಿದ್ದರು. ಚರ್ಚೆಯನ್ನೇ ನಡೆಸದೆ ವಿಷಯವನ್ನು ಹಿಂಪಡೆದಿತ್ತು. ಪ್ರಕರಣ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ನಲ್ಲಿದೆ ಎಂದು ಸರ್ಕಾರ ತನ್ನ ಈ ಹಿಂದಿನ ನಿರ್ಧಾರದಿಂದ ಹಿಂದೆಸರಿದಿತ್ತು.
ಈ ಬಗ್ಗೆ ಇಂದು ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಅದರ ಸಾರಾಂಶ ಇಲ್ಲಿದೆ:
ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.
ಜಿಂದಾಲ್‌ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ.
ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದಿದ್ದಾರೆ.
ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.
1/3— H D Kumaraswamy (@hd_kumaraswamy) May 28, 2021
(hd kumaraswamy re tweets on karnataka bjp government withdrawing from sale of land to jindal company in bellary)
Published On - 9:25 am, Fri, 28 May 21