AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್: ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಲ್ಲದೆ, ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅದೇನೆಂಬುದು ಇಲ್ಲಿದೆ.

ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್: ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ
ಹೆಚ್​ಡಿ ಕುಮಾರಸ್ವಾಮಿ
ಹರೀಶ್ ಜಿ.ಆರ್​.
| Edited By: |

Updated on: Sep 26, 2024 | 10:43 AM

Share

ನವದೆಹಲಿ, ಸೆಪ್ಟೆಂಬರ್ 26: ಭ್ರಷ್ಟಾಚಾರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಚರ್ಚೆಗಳು ನಡೆಯುತ್ತವೆ, ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದರು.

ಈ ಹಿಂದೆ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಕಾಂಗ್ರೆಸ್​ನಲ್ಲಿ 40 ಪರ್ಸೆಂಟ್​​ಗೂ ಹೆಚ್ಚು ಕಮಿಷನ್​ ಕೇಳ್ತಾರಂತೆ ಎಂಬ ಆರೋಪ ನಂತರ ಕೇಳಿಬಂತು. ಹೀಗಂತ ತುಮಕೂರಿನಲ್ಲಿ ಗುತ್ತಿಗೆದಾರರೊಬ್ಬರು ಹೇಳಿದ್ದಾರೆ ಎಂದು ಸಿದ್ದರಾಮಯ್ಯಗೆ ಹೆಚ್​ಡಿಕೆ ತಿರುಗೇಟು ನೀಡಿದರು.

ಗಂಗೇನಹಳ್ಳಿ ಡಿನೊಟಿಫಿಕೇಷನ್ ವಿಚಾರವಾಗಿ ನನಗೆ ಯಾವುದೇ ನೊಟೀಸ್ ಕೊಟ್ಟಿಲ್ಲ. ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಕದ್ದು ಹೋಗಲ್ಲ, ಈ ಕ್ಷಣದವರೆಗೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಈ‌ ಸರಕಾರದಲ್ಲಿ ಸುಳ್ಳು ಹೇಳಿಕೆ, ಸುಳ್ಳು ಪ್ರಚಾರ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಮುಡಾ ಹಗರಣ ಸಂಬಂಧ ಹರಿಯಾಣದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, ಮೋದಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದಿದ್ದರು. ಅಲ್ಲದೆ, ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು.

ಏನು ಹೇಳಿದ್ದರು ಮೋದಿ, ಸಿದ್ದು ತಿರುಗೇಟು ಏನಿತ್ತು?

ಹರಿಯಾಣದ ಗೋಹನಾದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಮಾತನಾಡಿದ್ದ ಮೋದಿ, ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ್ದು ಮತ್ತು ಪೋಷಿಸಿದ್ದೇ ಕಾಂಗ್ರೆಸ್. ಇದಕ್ಕೆ ಅನೇಕ ಉದಾಹರಣೆಗಳಿವೆ.. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಹಗರಣದಲ್ಲಿ ಸಿಲುಕಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ನೈತಿಕತೆ ಇದೆಯಾ? ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, ಪ್ರಧಾನಿ ಕಾರ್ಯಾಲಯದಲ್ಲಿ ಭ್ರಷ್ಟರನ್ನು ತೊಳೆದು ಶುದ್ಧ ಮಾಡುವ ವಾಷಿಂಗ್ ಮಷಿನ್ ಇದೆ. ಈ ಹಿಂದೆ ಮೋದಿಯೇ ಟೀಕಿಸಿದ್ದ ಪ್ರತಿಪಕ್ಷಗಳ ಅನೇಕ ನಾಯಕರು ಆ ವಾಷಿಂಗ್ ಮಷಿನ್​​ನಲ್ಲಿ ಶುದ್ಧವಾಗಿ ಬಿಜೆಪಿ ಸೇರಿದ್ದಾರೆ ಎಂದಿದ್ದರು. ಅದಕ್ಕೆ ಕುಮಾರಸ್ವಾಮಿಯವರನ್ನೂ ಉದಾಹರಣೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ