ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿರದ ಡಿಕೆ ಶಿವಕುಮಾರ್​ಗೆ ಈಗ ಮಮತೆ ಬಂದಿದೆ: ಕುಮಾರಸ್ವಾಮಿ ವ್ಯಂಗ್ಯ

| Updated By: ಗಣಪತಿ ಶರ್ಮ

Updated on: Jun 21, 2024 | 9:06 AM

Channapatna By-Elections; ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ದೆಹಲಿಯಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗ ಮಾಡಿದ ನಂತರ ಮಾತನಾಡಿದ ಅವರು, ಡಿಕೆ ಶಿವಕುಮಾರ್​​ ಬಗ್ಗೆ ಕುಹಕವಾಡಿದ್ದಾರೆ. ವಿವರ ಇಲ್ಲಿದೆ.

ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿರದ ಡಿಕೆ ಶಿವಕುಮಾರ್​ಗೆ ಈಗ ಮಮತೆ ಬಂದಿದೆ: ಕುಮಾರಸ್ವಾಮಿ ವ್ಯಂಗ್ಯ
ದೆಹಲಿಯಲ್ಲಿ ಕುಮಾರಸ್ವಾಮಿ ಯೋಗ
Follow us on

ಬೆಂಗಳೂರು, ಜೂನ್ 21: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಸ್ಪರ್ಧಿಸಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಡಿಸಿಎಂ ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ (Channapatna) ಹೋಗಿರಲಿಲ್ಲ. ಈಗ ಚನ್ನಪಟ್ಟಣದ ಬಗ್ಗೆ ಮಮತೆ ಬಂದಿದೆ ಎಂದು ವ್ಯಂಗ್ಯವಾಡಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್​ ಸಹೋದರನ ಕೊಡುಗೆ ಏನು? ಅವರು ಯಾರು ಬೇಕಾದರೂ ಅಭ್ಯರ್ಥಿಯಾಗಬಹುದು ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದರು.

ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. 2014ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲೂ ಮೋದಿ ಯೋಗ ಮಾಡಿದರು. ಯೋಗಕ್ಕೆ ಪ್ರಧಾನಿಗಳ ಪ್ರೊತ್ಸಾಹ ಹೆಚ್ಚು. ಇದರಿಂದಾಗಿ ಹೆಚ್ಚು ಪ್ರಚಾರ ದೊರೆತಿದೆ. ಯೋಗ ಕಾಯಿಲೆಗಳಿಂದ ಸ್ವಲ್ಪ ಮುಕ್ತಿ ನೀಡುತ್ತದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಯೋಗ ಮಾಡುತ್ತಿರುವುದು ಒಳ್ಳೆಯ ಸಂದೇಶ ಎಂದು ಕುಮಾರಸ್ವಾಮಿ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ
ಕುಮಾರಸ್ವಾಮಿ ತಿರುಗೇಟು ನೀಡಿದರು. ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ವಿಧಾನ ಸಭೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗೆದ್ದಿತ್ತಲ್ಲ, ಆಗ ಇವಿಎಂ ದೋಷವಿತ್ತಾ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅವರು ಟಾಂಗ್ ನೀಡಿದರು.

ಜನರ ಮನದಾಳದಲ್ಲಿ ಏನಿದೆ ಎಂಬುದು ನಿಗೂಢ: ವಿಜಯೇಂದ್ರ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸ್ಪರ್ಧೆ ಸಾಧ್ಯತೆ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ಶಾಸಕರಾಗಿದ್ದಾರೆ. ಆದರೂ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಜನರ ಮನದಾಳದಲ್ಲಿ ಏನಿದೆ ಅನ್ನೋದು ಇನ್ನೂ ನಿಗೂಢವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಸೋಲಿಸುವವರೇ ಇಲ್ಲ ಅಂದುಕೊಂಡಿದ್ದರು. ಆದರೆ ಜನರ ತೀರ್ಪು ಏನಿತ್ತು ಎಂಬುದನ್ನು ಎಲ್ಲರೂ ನೋಡಿದ್ದಾರೆ ಎಂದರು.

ಇದನ್ನೂ ಓದಿ: ಉಪಚುನಾವಣೆ ಘೋಷಣೆಗೂ ಮುನ್ನವೇ ರಂಗೇರುತ್ತಿದೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದೂ ವಿಜಯೇಂದ್ರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 am, Fri, 21 June 24