ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಕೈಬಿಟ್ಟಿದ್ದಕ್ಕೆ ಕುಮಾರಸ್ವಾಮಿ ಖಡಕ್ ಮಾತು

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರ ಹೆಸರು ಹಾಕದಿರುವುದುಕ್ಕೆ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಒಕ್ಕಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನು ಈ ವಿಚಾರವಾಗಿ ಖುದ್ದು ಎಚ್​ಡಿಕೆ ಪ್ರತಿಕ್ರಿಯಿಸಿದ್ದಾರೆ.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಕೈಬಿಟ್ಟಿದ್ದಕ್ಕೆ ಕುಮಾರಸ್ವಾಮಿ ಖಡಕ್ ಮಾತು
ಎಚ್​ಡಿ ಕುಮಾರಸ್ವಾಮಿ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 26, 2024 | 4:28 PM

ನವದೆಹಲಿ, (ಜೂನ್ 26): ರಾಜ್ಯ ಸರ್ಕಾರದಿಂದ ಆಚರಣೆ ಮಾಡುವ ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ಅಗ್ರಗಣ್ಯ ನಾಯಕರಾದ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಮತ್ತು ಎಚ್​ಡಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಡಲಾಗಿದೆ. ಇದೀಗ ಇದು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು . ನಾಳೆಯ ಸರ್ಕಾರದ ಕಾರ್ಯಕ್ರಮದಲ್ಲಿ ದೇವೇಗೌಡರು, ನನ್ನ ಹೆಸರು ಹಾಕಿಲ್ಲ ಎಂದು ಹೇಳಿದರು. ನಾನು ಈ ವಿಚಾರಕ್ಕೆ ಬಹಳ ಮಹತ್ವ ಕೊಡುವುದಿಲ್ಲ. ನಾನು ಯಾವಾಗಲೂ ಸಹ ಯಾವುದೇ ಕಾರ್ಯಕ್ರದಲ್ಲೂ ನನ್ನ ಹೆಸರು ಹಾಕಿಲ್ಲ ಅಂತ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆದಾಗಲೂ ಸಹ ಆ ನಗರಕ್ಕೆ(ಬೆಂಗಳೂರು) ಕೊಡುಗೆ ಕೊಟ್ಟಿದ್ದೇನೆ. ನಾನು ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕು ಅದನ್ನ ಮಾಡ್ತೀನಿ . ಇವತ್ತು ನನ್ನ ಹೆಸರು ಹಾಕಿದ್ರು, ಆದ್ರೆ ನಾಳೆ ನಾನ್ ಹೋಗೋಕೆ ಆಗುತ್ತಾ? ನಾಳೆ ರಾಷ್ಟ್ರಪತಿಗಳು ಜಂಟಿ ಭಾಷಣ ಮಾಡುತ್ತಾರೆ. ಹೀಗಾಗಿ ನಾನು ಇಲ್ಲಿ ಇರಬೇಕು. ಹೋಗುವುದಕ್ಕೆ ಆಗುವುದಿಲ್ಲ. ಅದಕ್ಕೆ ನಾನು ಇಲ್ಲೇ ಗೌರವ ಸಲಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಕುಮಾರಸ್ವಾಮಿ ಹೆಸರಿಗೆ ಕೊಕ್: ಷಡ್ಯಂತ್ರದಿಂದ ನಾಯಕರಾಗಲ್ಲವೆಂದ ವಿಜಯೇಂದ್ರ

ಕೆಂಪೇಗೌಡರ ಜಯಂತಿಯನ್ನ ಬೇರೆ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಸರ್ಕಾರ ಒಂದು ರೀತಿಯಲ್ಲಿ ಆಚರಣೆ ಮಾಡಿದ್ರೆ, ದೇವನಹಳ್ಳಿ ಭಾಗದಲ್ಲಿ ಮನೆ ಮನೇಲೂ ಫೋಟೋ ಇಟ್ಟು ಪೂಜೆ ಮಾಡಿ ಆಚರಣೆ ಮಾಡುತ್ತಾರೆ. ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣರಾದವರು ಕೆಂಪೇಗೌಡರು. ಕೆಂಪೇಗೌಡ ಕಟ್ಟಿರುವ ಕೆರೆಗಳನ್ನ ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಇರುವ ಕೆರೆಗಳನ್ನ ಕಾಪಾಡುವ ಕೆಲಸ ಮಾಡಬೇಕಿದೆ ಎಂದರು.

ಮೇಕೆದಾಟು ಕಟ್ಟಬೇಕು, ಕುಡಿಯೋ ನೀರು ಅಂತೆಲ್ಲ ಹೇಳುತ್ತಾರೆ. ಈಗಲೇ ಕುಡಿಯೋಕೆ ನೀರಿಲ್ಲದೆ ಕಷ್ಟದ ಪರಿಸ್ಥಿತಿ ಇದೆ. 15 ವರ್ಷ ಆದಮೇಲೆ ಏನಾಗುತ್ತೋ ಗೊತ್ತಿಲ್ಲ. ಸರ್ಕಾರ ನ್ಯಾಯಯುತವಾಗಿ ಜಯಂತಿ ಆಚರಣೆ ಮಾಡೋದಾದ್ರೆ ಆ ಕೆರೆಗಳನ್ನ ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನ ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ