AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ -HD ಕುಮಾರಸ್ವಾಮಿ

ಬೆಂಗಳೂರು: JDS ಜತೆ ಮೈತ್ರಿಯಿಲ್ಲವೆಂದು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ಪ್ರಸ್ತಾಪ ಜೆಡಿಎಸ್‌ನಿಂದ ಮುಂದಿಟ್ಟಿರುವುದು ಯಾರು? 2018ರ ಫಲಿತಾಂಶ ಬಳಿಕ ಕಾಂಗ್ರೆಸ್‌ನವರೇ ದೇವೇಗೌಡರ ಮನೆ ಬಾಗಿಲಿಗೆ ಬಂದರು ಹೊರತಾಗಿ ನಾವು ಯಾರೂ ಕೂಡ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ HD ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP […]

ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ -HD ಕುಮಾರಸ್ವಾಮಿ
KUSHAL V
| Edited By: |

Updated on: Oct 01, 2020 | 5:43 PM

Share

ಬೆಂಗಳೂರು: JDS ಜತೆ ಮೈತ್ರಿಯಿಲ್ಲವೆಂದು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮೈತ್ರಿ ಪ್ರಸ್ತಾಪ ಜೆಡಿಎಸ್‌ನಿಂದ ಮುಂದಿಟ್ಟಿರುವುದು ಯಾರು? 2018ರ ಫಲಿತಾಂಶ ಬಳಿಕ ಕಾಂಗ್ರೆಸ್‌ನವರೇ ದೇವೇಗೌಡರ ಮನೆ ಬಾಗಿಲಿಗೆ ಬಂದರು ಹೊರತಾಗಿ ನಾವು ಯಾರೂ ಕೂಡ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ HD ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಸರ್ಕಾರ ಅಲುಗಾಡಿಸುತ್ತಿರುವ, ಕಾಂಗ್ರೆಸ್ ಪಕ್ಷದ ವರ್ತನೆ ಮೈತ್ರಿಗೆ ಯೋಗ್ಯವಲ್ಲ ಎಂದು ಹೇಳಿದ್ದಾರೆ.

ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ. ಮೈತ್ರಿಧರ್ಮವನ್ನೂ ಧರ್ಮವೆಂದು ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ, ಕಾಂಗ್ರೆಸ್ ಜತೆ ಎಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಭಾವನೆ ಬೇಡ.ಹಾಗೆಯೇ ಜೆಡಿಎಸ್, ದೇವೇಗೌಡ ಹೆಸರನ್ನು ಬಳಸಿಕೊಂಡು ಆ ಪಕ್ಷದ ನಾಯಕರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ HDಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್