AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ

ಜಾತ್ಯತೀತ ಜನತಾದಳ ಪಕ್ಷ (ಜೆಡಿಎಸ್) 25 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದಳಪತಿಗಳು ರಾಜ್ಯಾದ್ಯಂತ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ , ಕೇಂದ್ರ ಸಚಿವರೂ ಆಗಿರುವ ಎಚ್​ ಡಿ ಕುಮಾರಸ್ವಾಮಿ ಅವರು ನಾಯಕರು ಸಭೆ ಮಾಡಿದ್ದಾರೆ. ಇದೇ ವೇಳೆ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಕೋರ್ ಕಮಿಟಿ ಪುನರ್ ರಚನೆ ಮಾಡಿದ್ದು, ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಿಂದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ.

ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ
Kumaraswamy And Gt Devegowda
ರಮೇಶ್ ಬಿ. ಜವಳಗೇರಾ
|

Updated on: Nov 10, 2025 | 6:33 PM

Share

ಬೆಂಗಳೂರು, (ನವೆಂಬರ್ 10): ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಿದ್ದು, ನಿರೀಕ್ಷೆಯಂತೆ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿ.ಟಿ.ದೇವೇಗೌಡ (GT Devegowda) ಅವರಿಗೆ ಗೇಟ್ ಪಾಸ್ ನೀಡಲಾಗಿದೆ. ಇವರ ಸ್ಥಾನಕ್ಕೆ ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇನ್ನು ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಕೋರ್ ಕಮಿಟಿ ಸದಸ್ಯರು

ಮಾಜಿ ಶಾಸಕ ರಾಜವೆಂಕಟಪ್ಪ ನಾಯಕ ದೊರೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು

ಇನ್ನೂ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಶ್ರೀ ಡಿ. ನಾಗರಾಜಯ್ಯರನ್ನು ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಶ್ರೀ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಲಾಗಿದೆ. HD ಕುಮಾರಸ್ವಾಮಿ ಅವರು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.

ಜೆಡಿಎಸ್ ಕೋರ್ ಕಮಿಟಿಯಿಂದ ಜಿಟಿಡಿಗೆ ಕೊಕ್

ಜೆಡಿಎಸ್ ಪಕ್ಷದ 25ರ ಸಂಭ್ರಮದಲ್ಲಿ ಪ್ರಮುಖರ ಸಮಿತಿ (ಕೋರ್ ಕಮಿಟಿ) ರಚಿಸಿದ್ದು, ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿಯಿಂದ ಗೇಟ್ ಪಾಸ್ ನೀಡಲಾಗಿದೆ. ಪದೇ ಪದೇ ಕಾಂಗ್ರೆಸ್ ಜೊತೆ ಕಾಣಿಸಿಕೊಂಡು ಸಿದ್ದರಾಮಯ್ಯ ಸೇರಿದಂತೆ ಇತರೆ ನಾಯಕರನ್ನು ಜಿಟಿ ದೇವೇಗೌಡ್ರು ಹಾಡಿಹೊಗಳುತ್ತಿರುವುದು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಸಂಬಂಧ ಕುಮಾರಸ್ವಾಮಿ ಮತ್ತು ಜಿಟಿಡಿ ನಡುವೆ ಮುಸುಕಿನ ಗುದ್ದಾಟಕ್ಕೂ ಕಾರಣವಾಗಿತ್ತು.

ಈ ಹಿಂದೆಯೂ ಸಹ ಕುಮಾರಸ್ವಾಮಿ ಹಾಗೂ ಜಿಟಿ ದೇವೇಗೌಡ ನಡುವೆ ಎಲ್ಲವೂ ಸರಿ ಇರಲಿಲ್ಲ. ಆಗ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡ ಮಧ್ಯೆ ಪ್ರವೇಶಿಸಿ ಜಿಟಿಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಖುದ್ದು ದೇವೇಗೌಡ್ರೇ ಮನೆಗೆ ಬಂದು ಮಾತುಕತೆ ನಡೆಸಿದ್ದರು. ಹೀಗಾಗಿ ಜಿಟಿ ದೇವೇಗೌಡ್ರು ಸಹ ಶಾಂತವಾಗಿದ್ದರು. ಆದ್ರೆ, ಇದೀಗ ಕುಮಾರಸ್ವಾಮಿ, ಜಿಟಿ ದೇವೇಗೌಡರಿಗೆ ಕೋರ್ ಕಮಿಟಿಯಿಂದ ಕೊಕ್ ಕೊಟ್ಟಿದ್ದಾರೆ. ಈಗ ಜಿಟಿ ದೇವೇಗೌಡ ನಡೆ ಏನು ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ