ರಾಮನಗರ, ನ.6: ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ನಾಳೆ ಸಿಎಂ ಆಗುವುದಾದರೆ ಜೆಡಿಎಸ್ನ 19 ಶಾಸಕರ ಬೆಂಬಲ ಇದೆ ಎಂದು ಹೇಳಿರುವುದು ವ್ಯಂಗ್ಯವಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (H.D. Kumaraswamy) ಹೇಳಿದರು. ರಾಮನಗರ (Ramanagara) ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಶಿವಕುಮಾರ್ ಸಿಎಂ ಆಗುತ್ತಾರಾ ಇಲ್ಲವಾ ಅಂತಾ ಕಾಂಗ್ರೆಸ್ನವರು ಹೇಳಬೇಕು ಎಂದರು.
ಪ್ರತಿ ದಿನ ನೀವು ಬನ್ನಿ, ನೀವು ಬನ್ನಿ ಅಂತಾ ಎಲ್ಲರನ್ನೂ ಕರೆಯುತ್ತಿದ್ದಾರೆ. ನಿನ್ನೆ ಸಿಎಂ ಕನಿಷ್ಠ 50 ಜನರನ್ನಾದರೂ ಕರೆ ತರಬೇಕು ಎಂದಿದ್ದಾರೆ. ಪ್ರತಿನಿತ್ಯ ನಮ್ಮ ಶಾಸಕರ ಮನೆ ಮುಂದೆ ಯಾಕೆ ಹೋಗುತ್ತಿದ್ದೀರಾ? ಒಳ್ಳೆಯ ಕೆಲಸ ಮಾಡುತ್ತೇನೆ ಅಂದರೆ ಎಲ್ಲರನ್ನೂ ಕಳಿಸುತ್ತೇನೆ ಎಂದಿದ್ದೇನೆ. ಆದರೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರಾ ಇಲ್ಲವಾ ಅಂತ ಕಾಂಗ್ರೆಸ್ ನಾಯಕರು ಹೇಳಬೇಕು ಎಂದರು.
ಇದನ್ನೂ ಓದಿ: ಜೆಡಿಎಸ್ 19 ಶಾಸಕರ ಬೆಂಬಲವಿದೆ; ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಚುನಾವಣೆ ಬಳಿಕ ಬಿಜೆಪಿ, ಜೆಡಿಎಸ್ ಇರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಾದ ಮೇಲೆ ಈ ರಾಜ್ಯದಲ್ಲಿ ಮಾತ್ರ ಅಲ್ಲ, ಈ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಯೋಚನೆ ಮಾಡಲಿ ಎಂದರು.
ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ವ್ಯಂಗ್ಯವಾಡಿದ್ದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ