ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹೆಚ್.ಡಿ.ಕುಮಾಸ್ವಾಮಿ
Follow us
sandhya thejappa
|

Updated on: May 13, 2021 | 1:08 PM

ಬೆಂಗಳೂರು: ಜನರಿಗೆ ಲಸಿಕೆ ಪಡೆಯಲು ಕರೆ ಕೊಟ್ಟು ಇಲ್ಲದಿದ್ದರೆ ಹೇಗೆ ಎಂದು ಟಿವಿ9ಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮನೆಯಿಂದ ಹೊರಬರದಂತೆ ಸರ್ಕಾರವೇ ಹೇಳುತ್ತದೆ. ಮತ್ತೊಂದೆಡೆ ಕೊವ್ಯಾಕ್ಸಿನ್ ಪಡೆಯಿರಿ ಎಂದು ಹೇಳುತ್ತಾರೆ. ರಾಜ್ಯ ಸರ್ಕಾರ ಯಾವಾಗ ಲಸಿಕೆ ಬರುತ್ತದೆ ಎಂದು ಜನರಿಗೆ ಸತ್ಯವನ್ನು ತಿಳಿಸಬೇಕು. ಜನರ ಜತೆ ಸರ್ಕಾರ ಬಹಳ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ. ನಾನು ಸರ್ಕಾರವನ್ನು ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ. ಕೊವಿಡ್ ಲಸಿಕೆ ಕೊಡುತ್ತೇನೆಂದು ಎಲ್ಲ ಕಡೆ ಹೇಳುತ್ತಾರೆ. ಆದರೆ ಕೊವಿಡ್ ಲಸಿಕೆ ಇಲ್ಲದೆ ಹೇಗೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4-5 ತಿಂಗಳಾದ್ರೂ ಪೂರ್ಣ ಲಸಿಕೆ ನೀಡಲು ಆಗುವುದಿಲ್ಲ. ಲಸಿಕೆ ತರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲವಾ. ಪ್ರಧಾನಿ ಮೋದಿ ವಿಶ್ವ ಗುರು ಆಗುವುದಕ್ಕೆ ಹೊರಟರು. ಹೀಗಾಗಿ ಬೇರೆ ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದ್ದಾರೆ. ದೇಶದ ಜನರಿಗೆ ಲಸಿಕೆ ನೀಡದೆ ವಿದೇಶಗಳಿಗೆ ರಫ್ತು ಮಾಡಿದ್ದರು. ಈಗ ಬೇರೆ ದೇಶದಿಂದ ಲಸಿಕೆ ಆಮದು ಮಾಡಿಕೊಳ್ಳಿ ಅಂತಾರೆ. ರಾಜ್ಯ ಸರ್ಕಾರಗಳಿಗೆ ಅನುಮತಿ ಕೊಡಿಸುವುದಾಗಿ ಹೇಳುತ್ತಿದ್ದಾರೆ. ಲಸಿಕಾ ಕಂಪನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

(HD Kumaraswamy says government was doing very badly with the people)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ