AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Jun 29, 2021 | 12:43 PM

Share

ರಾಮನಗರ: ನಾಡಿನ ವಿಚಾರದಲ್ಲಿ ಕೆಲ ಜನಪ್ರತಿನಿಧಿಗಳು ನಿರ್ಲಿಪ್ತ ಭಾವನೆ ಹೊಂದಿದ್ದಾರೆ. ಇದು ರಾಜ್ಯಕ್ಕೆ ಮಾರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಮಿಳುನಾಡಿನಲ್ಲಿ ನೀರಿನ ವಿಚಾರ ಬಂದಾಗ ಎಲ್ಲ ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಅವರ ಒಗ್ಗಟ್ಟು ನಮ್ಮಲ್ಲಿ ಇಲ್ಲದಿರುವುದು ದುರದೃಷ್ಟಕರ. ನಾಡಿನ ಭಾಷೆ, ನೆಲ, ಜಲದ ಹಕ್ಕು ಪಡೆಯಲು ಶಕ್ತಿ ಬೇಕು. ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವಕಾಶ ಸಿಕ್ಕಾಗಲೇ ಅವರು ಮಾಡಲಿಲ್ಲ. 2008 ರಲ್ಲಿ ನಾನೇ ಖರ್ಗೆ ಅವರಿಗೆ ಮನವಿ ಮಾಡಿದ್ದೆ. ನಾವು ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ ಎಂದು ತಿಳಿಸಿದರು.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮುಂದಾಗಿದ್ದೇನೆ. ನಾವು ಪ್ರಾರಂಭದಲ್ಲಿ ಕೊರೊನಾ ಇದ್ದಿದ್ದರಿಂದ ಪ್ರತಿಭಟನೆ ಮಾಡಲಿಲ್ಲ. ಕಾಂಗ್ರೆಸ್ನವರಿಗೆ ಪ್ರತಿಭಟನೆ ಮಾಡಲು ಅವಕಾಶ ಕೊಡುತ್ತಾರೆ. ಬಿಜೆಪಿ ಅವರು ಕಾರ್ಯಕ್ರಮ ಮಾಡಲು ಅವರಿಗೆ ಅವಕಾಶ ನೀಡುತ್ತಾರೆ. ನಮ್ಮ ಪಕ್ಷದ ಸಾಂಕೇತಿಕ ಪ್ರತಿಭಟನೆ ಅನುಮತಿ ನೀಡದಿದ್ದಕ್ಕೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಎರಡು ಪಕ್ಷಗಳ ಧೋರಣೆ ಯಾವ ರೀತಿ ಇದೆ ಎಂದು ನಾಡಿನ ಜನತೆ ಗಮನಿಸಬೇಕು ಎಂದು ಹೆಚ್ಡಿಕೆ ಹೇಳಿದರು.

ಇದನ್ನೂ ಓದಿ

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

(HD Kumaraswamy says Representatives have detached Feeling in Karnataka)

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ