ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ – ಎಚ್ ಡಿ ಕುಮಾರಸ್ವಾಮಿ

HD Kumaraswamy: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking) ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ - ಎಚ್ ಡಿ ಕುಮಾರಸ್ವಾಮಿ
ದೇಶ ಮುಂದಿನ ದಿನಗಳಲ್ಲಿ ಎಂತಹ ದುಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ; ಎಚ್.ಡಿ.ಕುಮಾರಸ್ವಾಮಿ
Follow us
| Updated By: Digi Tech Desk

Updated on:Feb 16, 2021 | 6:23 PM

ಬೆಂಗಳೂರು: ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನ Adolf Hitler ನಾಜಿ ಪಡೆಯಂತೆಯೇ ಆರ್​ಎಸ್​ಎಸ್​ RSS ಕ್ರೂರವಾಗಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ. ಲಕ್ಷಾಂತರ ಜನರನ್ನು ಸಾವಿಗೀಡು ಮಾಡಿದ ಜರ್ಮನಿಯ ಅಡಾಲ್ಫ್ ಹಿಟ್ಲರ್​ನಂತೆಯೇ ಆರ್​ಎಸ್​ಎಸ್​ ಸಹ ಕ್ರೂರವಾಗಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆರ್​ಎಸ್​ಎಸ್​ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ವಿವಾದ ಸೃಷ್ಟಿಸಿದೆ.

ಜರ್ಮನಿಯಲ್ಲಿ ನಾಜಿ ಸೇನೆ ರಚನೆಯಾದಾಗಲೇ ಆರ್​ಎಸ್​ಎಸ್ ಸಹ ಆರಂಭವಾಗಿದೆ. ನಾಜಿಗಳಂತೆಯೇ ಆರ್​ಎಸ್​ಎಸ್​ ಸಹ ದೇಶದಲ್ಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮುಂದಿನ ದಿನಗಳಲ್ಲಿ ದೇಶವನ್ನು ಯಾವ ಸ್ಥಿತಿಗೆ ಕರೆದೊಯ್ಯಲಿದೆ ಎಂದು ತಿಳಿಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಜನರು ತಮ್ಮ ಅಭಿಪ್ರಾಯಗಳನ್ನು ಸ್ವತಂತ್ರವಾಗಿ ವ್ಯಕ್ತಪಡಿಸಲು ಅವಕಾಶಗಳನ್ನು ಕಸಿದುಕೊಳ್ಳಲಾಗುತ್ತಿದೆ. ದೇಶ ಮುಂದಿನ ದಿನಗಳಲ್ಲಿ ಎಂತಹ ದು:ಸ್ಥಿತಿಗೆ ತಲುಪಲಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ವಿಶ್ವ ಹಿಂದೂ ಪರಿಷತ್, ಆರ್​ಎಸ್​ಎಸ್ ಮತ್ತು ಇನ್ನಿತರ ಹಿಂದೂ ​ಸಂಘಟನೆಗಳು ದೇಶಾದ್ಯಂತ ಅಭಿಯಾನದ ಮೂಲಕ ದೇಣಿಗೆ ಸಂಗ್ರಹಿಸಿದ್ದು, ಸಾವಿರ ಕೋಟಿಯಷ್ಟು ದೇಣಿಗೆ ಸಂಗ್ರಹವಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಉಡುಪಿಯ ರಥ: ಶ್ರೀರಾಮನ ಹೊತ್ತು ಮೆರೆಯುವ ರಥ ಉಡುಪಿಯಲ್ಲೇ ನಿರ್ಮಾಣ! ವಿವರ ಇಲ್ಲಿದೆ

Published On - 1:50 pm, Tue, 16 February 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ