ಪ್ರಜ್ವಲ್ ವಿಡಿಯೋ ಪ್ರಕರಣ: ಎಸ್​ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿ

ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್​ಐಟಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದರು. ಕುಮಾರಸ್ವಾಮಿ ಆರೋಪಗಳ ಮುಖ್ಯಾಂಶಗಳು ಇಲ್ಲಿವೆ.

ಪ್ರಜ್ವಲ್ ವಿಡಿಯೋ ಪ್ರಕರಣ: ಎಸ್​ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿ
ಹೆಚ್​ಡಿ ಕುಮಾರಸ್ವಾಮಿ
Follow us
Ganapathi Sharma
|

Updated on: May 07, 2024 | 12:57 PM

ಬೆಂಗಳೂರು, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್​​ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

‘ರಾಹುಲ್ ಗಾಂಧಿಯನ್ನು ಯಾಕೆ ವಿಚಾರಣೆಗೆ ಒಳಪಡಿಸಿಲ್ಲ’

ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್​ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್​ ಗಾಂಧಿಯವರನ್ನು ಇನ್ನು ಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

2,900 ಕೇಸ್ ಇದೆ​ ಎಂದು ಹೇಳುತ್ತಾರೆ. ಆದರೂ ಒದ್ದಾಡುತ್ತಾರೆ. ಯಾವ ಸಂತ್ರಸ್ತೆಯರೂ ಸಿಗುತ್ತಿಲ್ಲ ಎಂದು ಒದ್ದಾಡುತ್ತಿದ್ದಾರೆ. ಆ ಸಂತ್ರಸ್ತೆಯರಿಗೆ ಏನು ಸ್ಥೈರ್ಯ ತುಂಬುತ್ತೀರಿ ನೀವು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ನಾನು ಪ್ರಜ್ವಲ್​ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಏ.22ರಂದು ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಏ.22ರಂದು ಪ್ರಜ್ವಲ್​ ಪಕ್ಕದಲ್ಲಿ ಕುಳಿತ ಹೆಣ್ಣು ಮಗಳು ಯಾರು? ಏ.21ರಂದು ಬಿಡುಗಡೆಯಾದ ವಿಡಿಯೋದಲ್ಲಿರುವುದು ಯಾರು? ಅತ್ಯಾಚಾರ ಆಗಿದ್ರೆ ಆ ಹೆಣ್ಮಗಳು ಯಾಕೆ ಒಂದೇ ವೇದಿಕೆಯಲ್ಲಿ ಇರುತ್ತಿದ್ದರು?ಪ್ರಜ್ವಲ್​ ಪಕ್ಕ ಆ ಹೆಣ್ಣು ಮಗಳು ಯಾಕೆ ಕುಳಿತುಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.

ಸಂಪುಟದಿಂದ ಡಿಕೆ ಶಿವಕುಮಾರ್ ವಜಾಕ್ಕೆ ಆಗ್ರಹ

ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಅಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಹೀಗಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಪ್ರಜ್ವಲ್​​ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕಿದೆ. ಎಸ್​​ಐಟಿಯಿಂದ ನ್ಯಾಯಯುತವಾದ ತನಿಖೆ ಸಾಗದು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಕುಮಾರಸ್ವಾಮಿ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ