ನನ್ನ ಸರ್ಕಾರದಲ್ಲಿ ಈ ಅಧಿಕಾರಿ ಕೆಲ್ಸ ಮಾಡಿದ್ದಾರೆ, ಆದ್ರೆ ಸುಲಿಗೆ ಮಾಡಲು ಬಿಟ್ಟಿಲ್ಲ: ಇದು ನಿಮಗೆ ಸಾಧ್ಯನಾ? ಕಾಂಗ್ರೆಸ್​ಗೆ ಹೆಚ್​ಡಿಕೆ ಸವಾಲ್

ಗಂಗೇನಹಳ್ಳಿ ಡಿನೋಟಿಫಿಕೇಶ್​ ಪ್ರಕರಣದಲ್ಲಿ ಎಡಿಜಿಪಿ ಚಂದ್ರಶೇಖರ್ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ಯುದ್ಧ ತಾರಕಕ್ಕೇರಿದೆ. ಚಂದ್ರಶೇಖರ್​, ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎಂಬ ಕೆಲವರ ಪ್ರಶ್ನೆಗೆ ಟ್ವೀಟ್ ಮಾಡಿರುವ ಹೆಚ್​ಡಿಕೆ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ನನ್ನ ಸರ್ಕಾರದಲ್ಲಿ ಈ ಅಧಿಕಾರಿ ಕೆಲ್ಸ ಮಾಡಿದ್ದಾರೆ, ಆದ್ರೆ ಸುಲಿಗೆ ಮಾಡಲು ಬಿಟ್ಟಿಲ್ಲ: ಇದು ನಿಮಗೆ ಸಾಧ್ಯನಾ? ಕಾಂಗ್ರೆಸ್​ಗೆ ಹೆಚ್​ಡಿಕೆ ಸವಾಲ್
ನನ್ನ ಸರ್ಕಾರದಲ್ಲಿ ಈ ಅಧಿಕಾರಿ ಕೆಲ್ಸ ಮಾಡಿದ್ದಾರೆ, ಆದ್ರೆ ಸುಲಿಗೆ ಮಾಡಲು ಬಿಟ್ಟಿಲ್ಲ: ಇದು ನಿಮಗೆ ಸಾಧ್ಯನಾ? ಕಾಂಗ್ರೆಸ್​ಗೆ ಹೆಚ್​ಡಿಕೆ ಸವಾಲ್
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Sep 29, 2024 | 10:02 PM

ಬೆಂಗಳೂರು, ಸೆಪ್ಟೆಂಬರ್​ 29: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಮತ್ತು ಎಡಿಜಿಪಿ (ADGP) ಚಂದ್ರಶೇಖರ್ ನಡುವಿನ ವಾಕ್​ ಸಮರ ಮುಂದುವರೆದಿದೆ. 20 ಕೋಟಿ ಡೀಲ್ ಮಾಡ್ಕೊಂಡಿದ್ದಾರೆ. ರಾಜಕಾಲುವೆ ಮೇಲೆ ಮನೆ ಕಟ್ಟಿದ್ದಾರೆ ಅಂತಾ ಎಡಿಜಿಪಿ ವಿರುದ್ಧ ಕುಮಾರಸ್ವಾಮಿ ನಿನ್ನೆ ಬಾಂಬ್ ಹಾಕಿದ್ದರು. ಇದೀಗ ಚಂದ್ರಶೇಖರ್ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್​ಡಿ ಕುಮಾರಸ್ವಾಮಿ, ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎನ್ನುವುದು ಈ ಸರಕಾರದಲ್ಲಿರುವ ಕೆಲವರ ಪ್ರಶ್ನೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ 

ನನ್ನ ಸರಕಾರದಲ್ಲಿಯೂ ಈ ಅಧಿಕಾರಿ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ, ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್​ ಸಚಿವರೇ ಎಂದು ಪ್ರಶ್ನೆ ಮಾಡಿದ್ದಾರೆ. ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಿಡಿಯೋ ಬಾಂಬ್!

ಅಷ್ಟಕ್ಕೂ ಚಂದ್ರಶೇಖರ್ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಗುಡುಗಲು ಕಾರಣ ಏನಂದ್ರೆ, ರಾಜಭವನದಿಂದ ಹೆಚ್‌ಡಿಕೆ ವಿರುದ್ಧದ ಕಡತ ಸೋರಿಕೆಯಾಗಿದೆ, ತನಿಖೆ ನಡೆಸಬೇಕು ಅಂತಾ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದರು. ಇದನ್ನೇ ಮುಂದಿಟ್ಟು ಹೆಚ್‌ಡಿಕೆ ನಿನ್ನೆ ವಾಗ್ದಾಳಿ ನಡೆಸಿದ್ದರು. ಇದಿರಿಂದ ಕೆರಳಿದ ಚಂದಶೇಖರ್, ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:01 pm, Sun, 29 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ