ಡಾ‌‌ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ: ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಬಹುತೇಕ ಖಚಿತ

| Updated By: Ganapathi Sharma

Updated on: Mar 11, 2024 | 8:38 AM

ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಅವರು ದೆಹಲಿಯಲ್ಲಿ ಬಿಜೆಪಿ ನಾಯಕರು ಜೊತೆ ಮಂಗಳವಾರ ಮಾತುಕತೆ ನಡೆಸಲಿದ್ದಾರೆ. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಡಾ‌‌ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ: ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಬಹುತೇಕ ಖಚಿತ
ಡಾ‌‌ ಮಂಜುನಾಥ್
Follow us on

ಬೆಂಗಳೂರು, ಮಾರ್ಚ್ 11: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ (Dr CN Manjunath) ಅವರನ್ನು ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸುವಂತೆ ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್​ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ. ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್​ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು. ಸಭೆಯಲ್ಲಿ ಮಾಜಿ‌ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದರು.

ಬೆಂಗಳೂರು ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಎಂದು ಪರಿಗಣಿಸಲಾಗಿರುವ ಸಿಪಿ ಯೋಗಿಶ್ವರ್ ಕೂಡ ಮಂಜುನಾಥ್ ಸ್ಪರ್ಧೆಗೆ ಒಲವು ವ್ಯಕ್ತಪಡಿಸಿದ್ದರು.

ಇನ್ನು ಕಳೆದ ವಾರ ಮಂಜುನಾಥ್ ಸ್ಪರ್ಧೆ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಯೋಗೇಶ್ವರ್, ಅವರನ್ನು ಕಣಕ್ಕಿಳಿಸುವ ಪ್ರಯತ್ನ ನಡೆದಿದೆ. ಮುಂಜುನಾಥ ಅವರ ಮನವೊಲಿಸಲು ಅವರ ಮನೆಗೆ ಹೋಗಿದ್ದೆ. ರಾಜ್ಯ ರಾಜಕಾರಣದಲ್ಲಿ ಮಾತ್ರ ಆಸಕ್ತಿ ಇದೆ. ರಾಷ್ಟ್ರ ರಾಜಕಾರಣಕ್ಕೆ ಹೋಗಲು ಒಲವು ಇಲ್ಲ ಎಂದು ಯೋಗೇಶ್ವರ್ ಹೇಳಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ಡಾ ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತ

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಅತೀವ ಜನಮನ್ನಣೆ ಪಡೆದಿರುವ ಮಂಜುನಾಥ್ ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಒಲವು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ