ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

HD Kumaraswamy coronavirus positive: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ
ಮಾಜಿ ಸಿಎಂ ಕುಮಾರಸ್ವಾಮಿ
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:Apr 17, 2021 | 1:32 PM

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದಾರೆ: ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ಹೆಚ್​ ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ ಡಿ ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್​ ಡಿ ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್​ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್​ನಲ್ಲಿದ್ದರು.

61 ವರ್ಷ ವಯಸ್ಸಿನ ಹೆಚ್.ಡಿ.ಕುಮಾರಸ್ವಾಮಿ ಕಳೆದ 10 ದಿನಗಳಿಂದ ಉಪಚುನಾವಣಾ​ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೆಚ್​ಡಿಕೆ, ಬಸವಕಲ್ಯಾಣ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದರು. ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊವಿಡ್-19 ಟೆಸ್ಟ್​ ಮಾಡಿಸಿದ್ದರು. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ.ಪಿ.ನಗರದ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:42 am, Sat, 17 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್