ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ: ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.
ಇತ್ತೀಚೆಗೆ ಹೆಚ್ ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್ ಡಿ ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್ನಲ್ಲಿದ್ದರು.
61 ವರ್ಷ ವಯಸ್ಸಿನ ಹೆಚ್.ಡಿ.ಕುಮಾರಸ್ವಾಮಿ ಕಳೆದ 10 ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೆಚ್ಡಿಕೆ, ಬಸವಕಲ್ಯಾಣ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದರು. ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ.ಪಿ.ನಗರದ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.
I have tested positive for COVID-19. I request everyone who came in close contact with me over the last few days to isolate themselves and get tested.
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.— H D Kumaraswamy (@hd_kumaraswamy) April 17, 2021
ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:42 am, Sat, 17 April 21