ಕನ್ನಡ ಕಟುಕರ ಕೈಯಲ್ಲಿ ಸಿಲುಕಿಕೊಂಡಿದೆ; ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ.

ಕನ್ನಡ ಕಟುಕರ ಕೈಯಲ್ಲಿ ಸಿಲುಕಿಕೊಂಡಿದೆ; ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್
ಎಚ್ ​ಡಿ ಕುಮಾರಸ್ವಾಮಿ
Edited By:

Updated on: Dec 21, 2021 | 10:41 AM

ಬೆಂಗಳೂರು: ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ, ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಅಂತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮಾಡಿದ್ದಾರೆ.

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳ ಬಳ್ಳಿಗಳು ಅಂತ ಹೆಚ್​ಡಿಕೆ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತ ಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು. ಇದೆಂಥಾ ವಿಪರ್ಯಾಸ? ಅಂತ ಕುಮಾರಸ್ವಾಮೀ ಪ್ರಶ್ನಿಸಿದ್ದಾರೆ.

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ.. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೇವೆ ಎಂದು ಟ್ವೀಟ್ ಮಾಡಿರುವ ಹೆಚ್ಡಿಕೆ, ಇದು ಇನ್ನೆಷ್ಟು ದಿನ? ಅಂತ ಕೆಳಿದ್ದಾರೆ.

ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ? ಎಂದಿದ್ದಾರೆ.

2006ರಲ್ಲಿ ಶಿವಸೇನೆ-ಎಂಇಎಸ್ ಗಡಿ ತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನ ಕಲಾಪ ನಡೆಯಿತು. ಸುವರ್ಣ ಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ಕೈ ಚಳಕದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ವಿಷಯಾಂತರ ಮಾಡುವ ಹುನ್ನಾರ ಏಕೆ? ಅಂತ ಕುಮಾರಸ್ವಾಮಿ ಟ್ವೀಟ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ

Virat Kohli: 5 ಶತಕ, 6 ಅರ್ಧಶತಕ: ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ಹೇಗಿದೆ?: ಇಲ್ಲಿದೆ ಅಂಕಿಅಂಶ

ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯರು ಬರೆದುಕೊಟ್ಟ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂರು ಮಕ್ಕಳು ಸಾವು

Published On - 10:41 am, Tue, 21 December 21